ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಗುರುವಾರ ಆರಂಭವಾಗಿದ್ದು, ಮೊದಲ ದಿನ ನಡೆದ ರಸಾಯನಶಾಸ್ತ್ರ ಮತ್ತು ಬಿಸಿನೆಸ್ ಸ್ಟಡೀಸ್ ಪರೀಕ್ಷೆಯಲ್ಲಿ ಅವ್ಯವಹಾರ ಎಸಗಿದ ಹತ್ತು ಮಂದಿ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.

ಬಾಗಲಕೋಟೆ, ಗುಲ್ಬರ್ಗದಲ್ಲಿ ತಲಾ ಇಬ್ಬರು, ಬೆಂಗಳೂರು ಉತ್ತರ, ಬೆಳಗಾವಿ, ಗದಗ, ಕೋಲಾರ, ತುಮಕೂರು, ರಾಯಚೂರು ಜಿಲ್ಲೆಯಲ್ಲಿ ತಲಾ ಒಬ್ಬರನ್ನು ಡಿಬಾರ್ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಕಪ್ಪುಪಟ್ಟಿ: ವೇತನ ತಾರತಮ್ಯ ಹೋಗಲಾಡಿಸುವಂತೆ ಆಗ್ರಹಿಸಿ ಪರೀಕ್ಷಾ ಕಾರ್ಯದಲ್ಲಿ ತೊಡಗಿದ್ದ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಮತ್ತು ಇತರ ಸಿಬ್ಬಂದಿ ಕಪ್ಪುಪಟ್ಟಿ ಧರಿಸಿದ್ದರು. ಹಾಜರಾತಿ ಕೊರತೆಯಿಂದಾಗಿ ಪ್ರವೇಶ ಪತ್ರ ಸಿಗದ ಕೆಲ ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿ ಮುಂದೆ ಧರಣಿ ನಡೆಸಿದರು. ಈ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷಾ ವೇಳೆ ಪರ್ಯಾಯ ವ್ಯವಸ್ಥೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.