ಶುಕ್ರವಾರ, ಮೇ 14, 2021
21 °C

ಪೀತ ಪತ್ರಿಕೆ ವಿರೋಧಿಸಿ ಮುಧೋಳ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಧೋಳ: ಬ್ಲ್ಯಾಕ್‌ಮೇಲ್ ಪತ್ರಿಕೋದ್ಯಮ ಹಾಗೂ ನಕಲಿ ಪತ್ರಕರ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಂಥವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಮಂಗಳವಾರ ನಡೆಸಿದ ಮುಧೋಳ ಬಂದ್ ಸಂಪೂರ್ಣ ಯಶಸ್ವಿಯಾಯಿತು.ಪತ್ರಿಕಾರಂಗ ಸಂವಿಧಾನದ ನಾಲ್ಕನೆಯ ಅಂಗವಾಗಿದ್ದು, ಸಮಾಜದಲ್ಲಿ ಪತ್ರಿಕೆಗಳಿಗೆ ಹಾಗೂ ಪತ್ರಕರ್ತರಿಗೆ ಗೌರವದ ಸ್ಥಾನವಿದೆ. ಆದರೆ ಕೆಲವು ನಕಲಿ ಪತ್ರಕರ್ತರಿಂದಾಗಿ ಇಡೀ ಪತ್ರಿಕೋದ್ಯಮಕ್ಕೆ ಕಳಂಕ ಬರುವಂತಾಗಿದೆ. ಪೀತ ಪತ್ರಿಕೋದ್ಯಮಿಗಳು ಮತ್ತು ಪತ್ರಕರ್ತರನ್ನು ನಿಯಂತ್ರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಪ್ರತಿಭಟನೆ ನಂತರ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ನಂತರ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಕಿಸಾನ ಘಟಕದ ಅಧ್ಯಕ್ಷ ನಂದಕುಮಾರ ಪಾಟೀಲ, ಪತ್ರಿಕೆಗಳ ವಿರುದ್ಧ ತಮ್ಮ ಆಕ್ರೋಶವಿಲ್ಲ. ಕೆಲವು ವಾರ ಪತ್ರಿಕೆಗಳು ಪೀತ ಪತ್ರಿಕೋದ್ಯಮಕ್ಕೆ ಪ್ರಚೋದಿಸುತ್ತಿವೆ. ಅದರಿಂದಾಗಿ ಬ್ಲ್ಯಾಕ್‌ಮೇಲ್ ಪತ್ರಕರ್ತರ ಹಾವಳಿ ಹೆಚ್ಚಾಗಿ, ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದರು.ಪತ್ರಕರ್ತ ಬಾಬುರೆಡ್ಡಿ ತುಂಗಳ ಮಾತನಾಡಿ, ಪತ್ರಕರ್ತರು ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಮಾಹಿತಿ ಹಕ್ಕಿನ ದುರುಪಯೋಗ ಆಗುತ್ತಿದೆ. ನೋಂದಣಿ ಇಲ್ಲದ ಪತ್ರಿಕೆಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.ಜಿಪಂ ಮಾಜಿ ಅಧ್ಯಕ್ಷ ಶಿವಕುಮಾರ ಮಲಘಾಣ, ಪ್ರಮುಖರಾದ ನಂದಕುಮಾರ ಪಾಟೀಲ, ಸತೀಶ ಬಂಡಿವಡ್ಡರ, ರಾಚಪ್ಪ ಕರೇಹೊನ್ನ, ಎಸ್.ಆರ್.ನಿರಾಣಿ, ಪುರಸಭೆ ಅಧ್ಯಕ್ಷ ರಾಜು ಪಾಲೋಜಿ, ಪುರಸಭೆ ಸದಸ್ಯರಾದ ಸದಾಶಿವ ಬಾಗೋಡಿ, ಮಾರುತಿ ಪವಾರ, ಪಾಂಡು ಭೋವಿ, ಕಿಶೋರ ಮಸೂರಕರ, ಗಿರಿಮಲ್ಲಪ್ಪ ತೇಲಿ, ಇಬ್ರಾಹಿಂ ಸಾರವಾನ, ಸೋಮಶೇಖರ ಕರೇಹೊನ್ನ, ಮಹಮ್ಮದಸಾಬ ಕೌಜಲಗಿ ಹಾಗೂ ವಿವಿಧ ಸಮಾಜದ ಹಾಗೂ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ನಗರದಲ್ಲಿ ಕೆಲಹೊತ್ತು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದ ವರ್ತಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ವಾಹನಗಳ ಸಂಚಾರ ಸ್ಥಗಿತಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.