ಪೀಳಿಗೆಯ ನಡುವೆ ಸಾಮರಸ್ಯದ ಕೊರತೆ: ಕಾಗೋಡು ತಿಮ್ಮಪ್ಪ

7

ಪೀಳಿಗೆಯ ನಡುವೆ ಸಾಮರಸ್ಯದ ಕೊರತೆ: ಕಾಗೋಡು ತಿಮ್ಮಪ್ಪ

Published:
Updated:

ಹೊಸನಗರ:  ಕ್ರೀಡೆ, ಸಾಂಸ್ಕೃತಿಕ ಹಾಗೂ ಸೇವಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಕೊಳ್ಳುವಂತೆ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಸಲಹೆ ನೀಡಿದರು.ಕೊಡಚಾದ್ರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಾಂಸ್ಕೃತಿಕ, ಎನ್‌ಎಸ್‌ಎಸ್ ಹಾಗೂ ಕ್ರೀಡಾ ವಾರ್ಷಿಕ ಚಟುವಟಿಕೆಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.ನಾಗಾಲೋಟದ ಈ ಕಾಲಘಟ್ಟದಲ್ಲಿ ಪೀಳಿಗೆಗಳ ನಡುವಿನ ಸಾಮಾಜಿಕ ಸಾಮರಸ್ಯದ ಕೊರತೆ ಅಧಿಕವಾಗುತ್ತಿದೆ ಎಂದು ಅವರು ವಿಷಾದಿಸಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ.ಕರುಣಾಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, 30 ವಿದ್ಯಾರ್ಥಿಗಳಿಂದ ಆರಂಭವಾದ ಈ ಕಾಲೇಜಿನಲ್ಲಿ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಇವರಿಗೆ ಮೂಲ ಸೌಕರ್ಯ ಒದಗಿಸುವಂತೆ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಮಾಡಿದರು.ಜಿ.ಪಂ. ಸದಸ್ಯರಾದ ಜ್ಯೋತಿ ಚಂದ್ರಮೌಳಿ, ಕಲಗೋಡು ರತ್ನಾಕರ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ

ನಾಗರತ್ನ ದೇವರಾಜ್, ಉಪಾಧ್ಯಕ್ಷೆ ಗೀತಾ ನಿಂಗಪ್ಪ,  ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರುಕ್ಮಿಣಿಯಮ್ಮ, ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಶಿವಮೂರ್ತಿ, ಎನ್‌ಎಸ್‌ಸ್ ಸಂಚಾಲಕ ಸುಧಾಕರ್ ವೇದಿಕೆಯಲ್ಲಿ ಹಾಜರಿದ್ದರು.ದೈಹಿಕ ಶಿಕ್ಷಣ ನಿರ್ದೇಶಕ ಈಶ್ವರಪ್ಪ ಸ್ವಾಗತಿಸಿದರು. ಪ್ರೊ.ನಳಿನಚಂದ್ರ ಪ್ರಾಸ್ತಾವಿಕ ಮಾತನಾಡಿದರು. ಎನ್‌ಎಸ್‌ಎಸ್ ಸಂಚಾಲಕಿ ಪ್ರೊ.ಸೌಮ್ಯ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry