ಪುಟ್ಟರಾಜರಿಗೆ ಭಾರತರತ್ನ ಸಿಗಲಿ: ಸಿಎಂ ಆಶಯ

ಬುಧವಾರ, ಮೇ 22, 2019
34 °C

ಪುಟ್ಟರಾಜರಿಗೆ ಭಾರತರತ್ನ ಸಿಗಲಿ: ಸಿಎಂ ಆಶಯ

Published:
Updated:

ಗದಗ: ಅಂಧ-ಅನಾಥರ ಬಾಳಿಗೆ ಬೆಳಕಾಗಿದ್ದ ಡಾ.ಪಂಡಿತ ಪುಟ್ಟರಾಜ ಗವಾಯಿಯವರಿಗೆ ಮರಣೋತ್ತರವಾಗಿಯಾದರೂ  ಭಾರತ ರತ್ನ ಸಿಗಲಿ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಆಶಯ ವ್ಯಕ್ತಪಡಿಸಿದರು.ಗದುಗಿನ ಸ್ವಾಮಿ ವಿವೇಕಾನಂದ ಸಭಾಂಗಣದ ಗುರು ಕುಮಾರೇಶ್ವರ ವೇದಿಕೆಯಲ್ಲಿ ಬುಧವಾರ ಡಾ.ಪಂಡಿತ ಪುಟ್ಟರಾಜ ಗವಾಯಿಯವರ ಪ್ರಥಮ ಪುಣ್ಯಸ್ಮರಣೋತ್ಸವದ ಧರ್ಮಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ಪುಟ್ಟರಾಜ ಗವಾಯಿಯವರ ಸ್ಮಾರಕ ಭವನ ನಿರ್ಮಾಣ ಮಾಡಲು 5 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಅಲ್ಲದೆ ವೀರೇಶ್ವರ ಪುಣ್ಯಾಶ್ರಮದ ಅಭಿವೃದ್ಧಿಗಾಗಿ ಮೂರು ಕೋಟಿ ರೂಪಾಯಿ ನೀಡಲಾಗಿದೆ ಎಂದು ತಿಳಿಸಿದರು.ಸಾನ್ನಿಧ್ಯ ವಹಿಸಿದ್ದ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ತಾತಗುಣಿ ಎಸ್ಟೇಟ್‌ನಲ್ಲಿ ಸರ್ಕಾರ ಸ್ಥಾಪನೆ ಮಾಡಲು ಉದ್ದೇಶಿಸಿರುವ ಲಲಿತಕಲಾ ಕಾಲೇಜಿಗೆ ಪುಟ್ಟರಾಜ ಗವಾಯಿಯವರ ಹೆಸರಿಡಬೇಕು.

 

ಹಳ್ಳಿಗುಡಿ ಸುತ್ತಮುತ್ತಲ ರೈತರ ಜಮೀನು ಸ್ವಾಧೀನ ರದ್ದುಗೊಳಿಸಿದ ವಿಷಯವನ್ನು ಶೀಘ್ರವೇ ಗೆಜೆಟ್‌ನಲ್ಲಿ ಪ್ರಕಟಿಸಬೇಕು. ಗದುಗಿನ ಭಾಗದಲ್ಲಿ ಜಿಂಕೆ ಪಾರ್ಕ್ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದರು.ರುದ್ರಾಕ್ಷಿಮಠದ ಶಿವಬಸವ ಸ್ವಾಮೀಜಿ, ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಕಲ್ಲಯ್ಯಜ್ಜ ಸಾನ್ನಿಧ್ಯ ವಹಿಸಿದ್ದರು. ಸಚಿವರಾದ ಸಿ.ಸಿ.ಪಾಟೀಲ ಹಾಜರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry