ಭಾನುವಾರ, ಏಪ್ರಿಲ್ 11, 2021
32 °C

ಪುಟ್ಟಸ್ವಾಮಿಗೆ ಐಎಎಸ್‌ಗೆ ಬಡ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಿರಿಯ ಕೆಎಎಸ್ ಅಧಿಕಾರಿಯಾಗಿರುವ ರಾಜ್ಯ ಕೊಳಚೆ ನಿರ್ಮೂಲನಾ ಮಂಡಳಿ ಆಯುಕ್ತ ಎಸ್.ಪುಟ್ಟಸ್ವಾಮಿ ಅವರಿಗೆ 2007ರಿಂದಲೇ ಜಾರಿಗೆ ಬರುವಂತೆ ಐಎಎಸ್ ಹುದ್ದೆಗೆ ಬಡ್ತಿ ನೀಡಿ ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.ತಮಗೆ ಎಲ್ಲ ಅರ್ಹತೆಗಳಿದ್ದರೂ ಐಎಎಸ್ ಹುದ್ದೆಗೆ ಬಡ್ತಿ ನೀಡದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಪುಟ್ಟಸ್ವಾಮಿ ಅವರು ಕೇಂದ್ರ ಆಡಳಿತ ನ್ಯಾಯ ಮಂಡಳಿಗೆ ದೂರು ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಮಂಡಳಿಯು ಪುಟ್ಟಸ್ವಾಮಿ ಅವರಿಗೆ ಐಎಎಸ್ ಹುದ್ದೆಗೆ ಬಡ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು.ನ್ಯಾಯ ಮಂಡಳಿಯ ಆದೇಶದಂತೆ ಕೇಂದ್ರ ಸರ್ಕಾರ ಎರಡು ದಿನಗಳ ಹಿಂದೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.