ಪುಟ್ಟಸ್ವಾಮಿ, ಸಂಸದ ಬಸವರಾಜ್ ಬಿಜೆಪಿ ಪಕ್ಷದಿಂದ ವಜಾ

7

ಪುಟ್ಟಸ್ವಾಮಿ, ಸಂಸದ ಬಸವರಾಜ್ ಬಿಜೆಪಿ ಪಕ್ಷದಿಂದ ವಜಾ

Published:
Updated:

ನವದೆಹಲಿ (ಐಎಎನ್‌ಎಸ್): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಬಲಿಗರೆಂದೇ ಗುರುತಿಸಿಕೊಂಡಿರುವ ಸಹಕಾರ ಸಚಿವ ಬಿ.ಜೆ. ಪುಟ್ಟಸ್ವಾಮಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆಯ ಆರೋಪದ ಮೇಲೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಶನಿವಾರ ಸಚಿವ ಸಂಪುಟದಿಂದ ಕೈಬಿಟ್ಟಿದ್ದಾರೆ.`ಸಹಕಾರ ಸಚಿವ ಬಿ.ಜಿ. ಪುಟ್ಟಸ್ವಾಮಿ ಹಾಗೂ ತುಮಕೂರು ಬಿಜೆಪಿ ಸಂಸದ ಜಿ. ಬಸವರಾಜ್ ಅವರು ಪಕ್ಷದ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದರಿಂದ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿದ್ದು, ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಇದು ಪಕ್ಷದ ನಿರ್ಧಾರವಾಗಿದೆ' ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು  ಪಕ್ಷದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ  ತಿಳಿಸಿದ್ದಾರೆ.ಪಕ್ಷದ ಈ ನಿರ್ಣಯದಿಂದ ಸಂಸದ ಬಸವರಾಜ್ ಅವರು ಸಂಸದ ಸ್ಥಾನಕ್ಕೂ ಕುತ್ತು ಬರಲಿದೆ ಎಂದು ಈಶ್ವರಪ್ಪ ಹೇಳಿದರು.

ಇದು ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಗುರುತಿಸಿಕೊಂಡಿರುವ ಬೆಂಬಲಿಗರಿಗೆ ಬಿಜೆಪಿಯ ಪರೋಕ್ಷ ಎಚ್ಚರಿಕೆಯ ಗಂಟೆಯಾಗಿದೆ ಎನ್ನಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry