ಮಂಗಳವಾರ, ಮೇ 18, 2021
28 °C

ಪುಟ್‌ಪಾತ್ ಮೇಲೆ ವಾಹನ: ಪರವಾನಗಿ ರದ್ದು- ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಾದಚಾರಿ ಮಾರ್ಗದಲ್ಲಿ ವಾಹನ ಚಾಲನೆ ಮಾಡಿದರೆ ಸವಾರನ ಚಾಲನಾ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ಪಾದಚಾರಿ ಮಾರ್ಗಗಳಲ್ಲಿ ವಾಹನ ಚಾಲನೆ ಮಾಡುವ ಪ್ರಕರಣಗಳು ನಗರದಲ್ಲಿ ನಿರಂತರವಾಗಿ ಹೆಚ್ಚುತ್ತಿವೆ. ಜನವರಿಯಲ್ಲಿ 557 ಪ್ರಕರಣಗಳು ದಾಖಲಾದರೆ, ಫೆಬ್ರುವರಿಯಲ್ಲಿ 1,105 ಹಾಗೂ ಮಾರ್ಚ್‌ನಲ್ಲಿ 1,558 ಪ್ರಕರಣಗಳು ದಾಖಲಾಗಿವೆ. ಆದ್ದರಿಂದ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.`ಪಾದಚಾರಿ ಮಾರ್ಗಗಳಲ್ಲಿ ವಾಹನ ಚಾಲನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಚಾರ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಅಂತಹ ಸವಾರರ ಪರವಾನಿಗೆಯನ್ನು ವಶಪಡಿಸಿಕೊಂಡು ಕೂಡಲೇ ರದ್ದುಪಡಿಸಲು ಸೂಚಿಸಲಾಗಿದೆ~ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಎಂ.ಎ.ಸಲೀಂ ತಿಳಿಸಿದ್ದಾರೆ.ಕ್ವೀನ್ಸ್ ರಸ್ತೆ, ಜಯನಗರದ ಕೆಲವು ರಸ್ತೆಗಳು, ಬಿಟಿಎಂ ಲೇಔಟ್‌ನ 16ನೇ ಮುಖ್ಯರಸ್ತೆಯಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿವೆ. ಬೈಕ್ ಸವಾರ ಸುಲಭವಾಗಿ ಪಾದಚಾರಿ ಮಾರ್ಗವನ್ನು ಹತ್ತದಂತೆ ರಸ್ತೆ ಮಟ್ಟದಿಂದ ಎತ್ತರಿಸಬೇಕು ಎಂದು ಅವರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.