ಹಳೇಬೀಡು: ಸರ್ಕಾರಿ ಯೋಜನೆಗಳು ದಲಿತರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಳೇಬೀಡು ಶಾಖೆ ಸದಸ್ಯರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಗ್ರಾಮಸಭೆ ನಡೆಸಲು ಸಿದ್ಧತೆ ನಡೆಯುತ್ತಿತ್ತು. ಕಚೇರಿಗೆ ಬೀಗ ಹಾಕಿದ ಪ್ರತಿಭಟನಾಕಾರರು ನ್ಯಾಯ ದೊರಕುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ. ಸಭೆ ನಡೆಯುವುದಕ್ಕೂ ಅವಕಾಶ ಕೊಡುವುದಿಲ್ಲ. ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ದಲಿತ ಕಾಲೊನಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಯಗಚಿ ಜಲಾಶಯ ಹಿನ್ನೀರಿನಿಂದ ಹಳೇಬೀಡಿಗೆ ಪೈಪ್ಲೈನ್ ಆಗಿದ್ದರೂ ಪಂಚಾಯಿತಿಯವರು ನೀರು ಸರಬರಾಜು ವ್ಯವಸ್ಥೆ ಮಾಡುತ್ತಿಲ್ಲ. ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಿಸಿದ್ದರೂ ಬಿಲ್ ಬಂದಿಲ್ಲ.

ಕಟ್ಟೆಸೋಮನಹಳ್ಳಿ ಸರ್ಕಾರಿ ಜಾಗಗಳಲ್ಲಿ ಗುಡಿಸಲು ಕಟ್ಟಿಕೊಂಡು ಸೂರಿಗಾಗಿ ಅಲೆಯುತ್ತಿರುವ ದಲಿತ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿಲ್ಲ. ಹೆದ್ದಾರಿ 234ರಲ್ಲಿ ಮನೆ ಕಳೆದುಕೊಂಡು 13 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಸವರಾಜು ಅಯ್ಯಣ್ಣನವರ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜಶೇಖರ್ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗೆ ಶೀಘ್ರದಲ್ಲಿಯೇ ಪರಿಹಾರ ನೀಡಲಾಗುವುದು.

15 ದಿನದೊಳಗೆ ಕಟ್ಟೆಸೋಮನಹಳ್ಳಿ ದಲಿತರಿಗೆ ಪುನರ್ವಸತಿಗೆ ಕ್ರಮಕೈಗೊಳ್ಳಲಾಗುವುದು. ಕುಡಿಯುವ ನೀರಿನ ಸಮಸ್ಯೆ ಇರುವ ಸ್ಥಳದಲ್ಲಿ ಹೆಚ್ಚುವರಿ ಕೊಳವೆ ಬಾವಿಗೆ ಹಣ ಮಂಜೂರು ಮಾಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.

ದಲಿತ ಮುಖಂಡರಾದ ನಿಂಗರಾಜು, ಹುಲಿಕೆರೆ ಕುಮಾರ್, ತಿರುಮಲನಹಳ್ಳಿ ಶಿವಕುಮಾರ್, ಭೈರೇಶ್, ಪ್ರೇಮ್ಕುಮಾರ್ ಪ್ರತಿಭಟನೆಯ ನೇತೃತ್ವವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.