ಭಾನುವಾರ, ಅಕ್ಟೋಬರ್ 20, 2019
22 °C

ಪುನರ್ ಪರಿಶೀಲಿಸಿ

Published:
Updated:

ಮೆಲ್ಬರ್ನ್ (ಪಿಟಿಐ): ಭಾರತಕ್ಕೆ ಯುರೇನಿಯಂ ಮಾರಾಟ ಮಾಡುವ ನಿರ್ಧಾರ ಪುನರ್‌ಪರಿಶೀಲಿಸುವಂತೆ ಆಸ್ಟ್ರೇಲಿಯಾದ ಆಡಳಿತಾರೂಢ ಲೇಬರ್ ಪಕ್ಷವನ್ನು ಇತರ ರಾಜಕೀಯ ಪಕ್ಷಗಳು ಒತ್ತಾಯಿಸುತ್ತಿವೆ.

ಅಣ್ವಸ್ತ್ರ ಪ್ರಸರಣ ನಿಷೇಧ ಒಪ್ಪಂದಕ್ಕೆ (ಎನ್‌ಟಿಪಿ) ಸಹಿ ಹಾಕದ ಭಾರತಕ್ಕೆ ಯುರೇನಿಯಂ ಮಾರಾಟ ಮಾಡಲು ಒಪ್ಪದ ಆಸ್ಟ್ರೇಲಿಯಾ ಇತ್ತೀಚೆಗೆ ತನ್ನ ನಿರ್ಧಾರ ಬದಲಿಸಿತ್ತು. 

ಅಮೆರಿಕದ ಚಿಂತಕರ ಚಾವಡಿಯೊಂದು ಈಚಿನ ತನ್ನ ವರದಿಯಲ್ಲಿ ಎತ್ತಿ ತೋರಿಸಿತ್ತು. ಈ ವರದಿಯ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಗ್ರೀನ್ಸ್ ಪಕ್ಷ, ಭಾರತಕ್ಕೆ ಯುರೇನಿಯಂ ಪೂರೈಸುವ ನಿರ್ಧಾರ ಪರಿಶೀಲಿಸುವಂತೆ ಅಲ್ಲಿನ ಸರ್ಕಾರದ ಮೇಲೆ ಪರೋಕ್ಷ ಒತ್ತಡ ಹೇರಿದೆ.

Post Comments (+)