ಮಂಗಳವಾರ, ಮೇ 11, 2021
25 °C

ಪುರಪ್ರವೇಶಕ್ಕೆ ಅದ್ದೂರಿ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಶನಿವಾರ (ಜೂ.22) ನಡೆಯಲಿರುವ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸಂಸ್ಮರಣೋತ್ಸವ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿ ಅವರ ಪುರಪ್ರವೇಶ ಮತ್ತು ಗುರುವಂದನ ಕಾರ್ಯಕ್ರಮಕ್ಕಾಗಿ ಇಲ್ಲಿನ ಆದಿಚುಂಚನಗಿರಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಬೃಹತ್ ವೇದಿಕೆ ಸಿದ್ಧವಾಗುತ್ತಿದೆ.ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಗುರುವಾರ ಕಾರ್ಯಕ್ರಮದ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.

ವೇದಿಕೆ ನಿರ್ಮಾಣ ಬಹುತೇಕ ಪೂರ್ಣಗೊಂಡಿದೆ. ಮಳೆ ಬರುವ ಸಾಧ್ಯತೆ ಇರುವುದರಿಂದ ಶೀಟ್‌ಗಳನ್ನು ಬಳಸಿ ವೇದಿಕೆ ಸಿದ್ಧಮಾಡಲಾಗುತ್ತಿದೆ.ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ತಾಲ್ಲೂಕಿನಿಂದ ಸುಮಾರು 10 ರಿಂದ 15 ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಹಾಗೂ ಭದ್ರತೆ ಕುರಿತಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ' ಎಂದು ತಿಳಿಸಿದರು.ಕಾರ್ಯಕ್ರಮಕ್ಕೆ ಬರುವ ಎಲ್ಲ ಭಕ್ತರಿಗೂ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಸಮಸ್ಯೆ ಉಂಟಾಗದ ರೀತಿಯಲ್ಲಿ ಆದಿಚುಂಚನಗಿರಿ ಕಲ್ಯಾಣ ಮಂಟಪ ಹಾಗೂ ಇತರೆ ಮೂರು ಕಡೆಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ.ಒಂದೇ ದ್ವಾರದಲ್ಲಿ ಎಲ್ಲರೂ ಆಗಮಿಸಲು ಸಾಧ್ಯವಿಲ್ಲದ ಕಾರಣ 2 ಅಥವಾ 3 ಕಡೆಗಳಿಂದ ಪ್ರವೇಶ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.