ಭಾನುವಾರ, ಜನವರಿ 26, 2020
18 °C

ಪುರಭವನದ ಬಳಿ ಲೈಂಗಿಕ ಅಲ್ಪಸಂಖ್ಯಾತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಲಿಂಗರತಿ ಶಿಕ್ಷಾರ್ಹ ಅಪರಾಧ ಎಂದು ಸುಪ್ರೀಂಕೋರ್ಟ್‌ ನೀಡಿದ ತೀರ್ಪನ್ನು ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರು ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸದಸ್ಯರು ನಗರದ ಪುರಭವನದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೂರಾರು ಮಂದಿ ಲೈಂಗಿಕ ಅಲ್ಪ­ಸಂಖ್ಯಾತರು ಸುಪ್ರೀಂಕೋರ್ಟ್‌ ತೀರ್ಪಿನ ವಿರುದ್ಧ ಘೋಷಣೆ ಕೂಗಿ­ದರು. ತಮ್ಮ ಹಕ್ಕುಗಳನ್ನು ಕಸಿದು­ಕೊಳ್ಳಲು ಯಾರಿಗೂ ಅಧಿಕಾರವಿಲ್ಲ ಎಂದು ಪ್ರತಿಭಟತಾನಿರತರು ಆಕ್ರೋಶ ವ್ಯಕ್ತಪಡಿಸಿದರು.‘ದೆಹಲಿ ಹೈಕೋರ್ಟ್‌ 2009ರಲ್ಲಿ ಸಲಿಂಗರತಿ ಅಪರಾಧವಲ್ಲ ಎಂದು ತೀರ್ಪುಕೊಟ್ಟಿತ್ತು. ನಾಲ್ಕು ವರ್ಷಗಳ ಬಳಿಕ ಆ ತೀರ್ಪನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿ ಸಲಿಂಗರತಿ ಶಿಕ್ಷಾರ್ಹ ಅಪರಾಧ ಎಂದು ತೀರ್ಪು ನೀಡಿದೆ. ಇದು ಲೈಂಗಿಕ ಅಲ್ಪಸಂಖ್ಯಾತರ ಹಕ್ಕು­ಗಳನ್ನು ಕಸಿದುಕೊಳ್ಳುವ ಪ್ರಯತ್ನ’ ಎಂದು ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆಯ ಮಲ್ಲು ಹೇಳಿದರು.‘ತೀರ್ಪಿನ ಬಗ್ಗೆ ಸುಪ್ರೀಂಕೋರ್ಟ್‌ ಪುನರ್‌ಪರಿಶೀಲನೆ ನಡೆಸಬೇಕು. ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಾಯಲು ಸರ್ಕಾರ ಮುಂದಾಗಬೇಕು. ತೀರ್ಪಿನ ವಿರುದ್ಧ ರಾಜ್ಯದೆಲ್ಲೆಡೆ ಹೋರಾಟ ನಡೆಸಲಾಗುವುದು’ ಎಂದರು.

ಪ್ರತಿಕ್ರಿಯಿಸಿ (+)