ಪುರುಷ, ಮಹಿಳೆಯರಿಗೆ ಓಟ ಸ್ಪರ್ಧೆ

7

ಪುರುಷ, ಮಹಿಳೆಯರಿಗೆ ಓಟ ಸ್ಪರ್ಧೆ

Published:
Updated:

ತಿಪಟೂರು: ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿ ಎಂದು ಉಪ ವಿಭಾಗಾಧಿಕಾರಿ ಶಿಲ್ಪಾ ಅಭಿಪ್ರಾಯಪಟ್ಟರು.ಗುರುವಾರ ತಿಪಟೂರು ಸ್ಪೋರ್ಟ್ಸ್ ಕ್ಲಬ್ ಹಾಗೂ ರೋಟರಿ ವತಿಯಿಂದ ವಿಜಯದಶಮಿ ಹಾಗೂ ದಸರಾ ಪ್ರಯುಕ್ತ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಪುರುಷರ ಮತ್ತು ಮಹಿಳೆಯರ ರಸ್ತೆ ಓಟದ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.ತಿಪಟೂರು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಟಿ.ಎಸ್.ಶಿವಪ್ರಸಾದ್ ಮಾತನಾಡಿ, ಲಭ್ಯವಿರುವ ಸೌಲಭ್ಯ ಮತ್ತು ಸರಕಾರದ ಸಹಾಯ ಪಡೆದು ಕ್ರೀಡೆಯಲ್ಲಿ ಉತ್ತಮ ಸಾಮರ್ಥ್ಯ ಪ್ರದರ್ಶಿಸಲು ಯತ್ನಿಸಬೇಕು ಎಂದರು.

ತಿಪಟೂರು ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ಲೋಕೇಶ್ವರ್, ನಗರಸಭೆ ಅಧ್ಯಕ್ಷೆ ಸರಸ್ವತಿ, ರೋಟರಿ ಕ್ಲಬ್ ಅಧ್ಯಕ್ಷ ರಮೇಶ್‌ಬಾಬು, ತಿಪಟೂರು ಸ್ಪೋರ್ಟ್ಸ್ ಕ್ಲಬ್ ಖಜಾಂಚಿ ಟಿ.ಎಸ್.ಬಸವರಾಜು, ಕಾರ್ಯದರ್ಶಿ ಶಿವಶಂಕರ್, ಸಿಪಿಐ ರಾಮಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry