ಶುಕ್ರವಾರ, ಫೆಬ್ರವರಿ 26, 2021
19 °C

ಪುಷ್ಪ ಪ್ರದರ್ಶನ ವೀಕ್ಷಿಸಿದ 2.75ಲಕ್ಷ ಮಂದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುಷ್ಪ ಪ್ರದರ್ಶನ ವೀಕ್ಷಿಸಿದ 2.75ಲಕ್ಷ ಮಂದಿ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಗುಸ್ತವ್‌ ಹರ್ಮನ್‌ ಕೃಂಬಿಗಲ್‌ ಅವರ ನೆನಪಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪುಷ್ಪ ಪ್ರದರ್ಶನವನ್ನು ಮಂಗಳವಾರ ಹೆಚ್ಚಿನ ಸಂಖ್ಯೆಯ ಜನ ವೀಕ್ಷಿಸಿದರು.ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಜೆ ಇದ್ದ ಕಾರಣ ಪುಷ್ಪ ಪ್ರದರ್ಶನ ನೋಡಲು ಜನ ಸಾಗರೋಪಾದಿಯಲ್ಲಿ ಹರಿದುಬಂದರು. ಜನರನ್ನು ನಿಯಂತ್ರಿಸಲು ಹೆಚ್ಚಿನ ಪೊಲೀಸ್‌ ಹಾಗೂ ಗೃಹ ರಕ್ಷಕರನ್ನು ನೇಮಿಸಲಾಗಿತ್ತು.‘ಈ ಬಾರಿಯ ಪುಷ್ಪ ಪ್ರದರ್ಶನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.  ಪುಷ್ಪ ಪ್ರದರ್ಶನವನ್ನು ಒಟ್ಟು 2.75 ಲಕ್ಷ ಜನ ವೀಕ್ಷಿಸಿದ್ದಾರೆ. ಅದರಲ್ಲಿ 19 ಸಾವಿರ ಮಕ್ಕಳು ಸೇರಿದ್ದಾರೆ’ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎಂ.ಜಗದೀಶ್‌ ‘ಪ್ರಜಾವಾಣಿ’ಗೆ ತಿಳಿಸಿದರು.‘2015ರಲ್ಲಿ ₹1.20 ಕೋಟಿ ಸಂಗ್ರಹವಾಗಿತ್ತು. ಈ ವರ್ಷ ₹1.31 ಕೋಟಿ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಟಿಕೆಟ್‌ ದರ ₹10 ಹೆಚ್ಚಿಸಲಾಗಿದೆ’ ಎಂದರು.‘ಸಾಮಾನ್ಯ ದಿನಗಳಲ್ಲಿ ಲಾಲ್‌ಬಾಗ್‌ನ ಪ್ರವೇಶ ದ್ವಾರವನ್ನು ಸಂಜೆ 6 ಗಂಟೆಗೆ ಮುಚ್ಚಲಾಗುತ್ತಿತ್ತು. ಇಂದು 6.30ರ ಬಳಿಕ ಮುಚ್ಚಲಾಯಿತು’ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.