ಶನಿವಾರ, ಅಕ್ಟೋಬರ್ 19, 2019
28 °C

ಪೂಜಾಗಾಂಧಿ ಜೆಡಿಎಸ್‌ಗೆ

Published:
Updated:

ಬೆಂಗಳೂರು: ಚಲನಚಿತ್ರ ನಟಿ ಪೂಜಾಗಾಂಧಿ ಅವರು ರಾಜಕೀಯ ಕ್ಷೇತ್ರ ಪ್ರವೇಶಿಸಲು ಆಸಕ್ತಿ ತೋರಿದ್ದು, ಶೀಘ್ರದಲ್ಲಿಯೇ ಜೆಡಿಎಸ್‌ಗೆ ಸೇರ್ಪಡೆಯಾಗಲಿದ್ದಾರೆ.ಜೆಡಿಎಸ್ ಕಚೇರಿಯಲ್ಲಿ ಗುರುವಾರ ನಡೆದ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಪೂಜಾಗಾಂಧಿ ಅಚ್ಚರಿ ಮೂಡಿಸಿದರು. ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿರೆಡ್ಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ರಾಜಕೀಯ ಧ್ಯೆಯೋದ್ದೇಶಗಳನ್ನು ಮೆಚ್ಚಿ ಜೆಡಿಎಸ್ ಸೇರಲು ಆಸಕ್ತಿ ತೋರಿದ್ದಾರೆ ಎಂಬುದಾಗಿ ಹೇಳಿದರು.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿ ಪಕ್ಷ ಸೇರ್ಪಡೆಯ ದಿನಾಂಕ ನಿಗದಿಪಡಿಸಲಾಗುವುದು ಎಂದರು. ಆದರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪೂಜಾಗಾಂಧಿ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

Post Comments (+)