ಮಡಿಕೇರಿ: ಬೆಳಗಾವಿಯಲ್ಲಿ ಮಾರ್ಚ್ 11ರಿಂದ 13ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನಕ್ಕೆ ಜಿಲ್ಲೆಯಿಂದ ತೆರಳುವ ಸ್ತಬ್ಧಚಿತ್ರ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಎಲ್ಲ ರೀತಿಯ ಸಹಕಾರ ನೀಡಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎಚ್. ಅಶ್ವತ್ಥನಾರಾಯಣಗೌಡ ಕೋರಿದ್ದಾರೆ.

ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಂಗಳವಾರ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗುವ ಕಾರ್ಯಕ್ರಮಗಳ ಕುರಿತು ನಡೆದ ಎರಡನೇ ಸುತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ.

ಹಾಗೆಯೇ, ಆಯಾಯ ತಾಲ್ಲೂಕುಗಳಲ್ಲಿ ತಮ್ಮ ನೇತೃತ್ವದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಶು ಅಭಿವೃದ್ಧಿ ಅಧಿಕಾರಿಗಳು, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳು ಹಾಗೂ ನಗರಸಭೆ ಪೌರಾಯುಕ್ತರೂ ಸೇರಿದಂತೆ ಇತರರನ್ನು ಒಳಗೊಂಡ ಸಮಿತಿ ರಚಿಸಿ ಮಾರ್ಚ್ 3ರಂದು ಸಭೆ ನಡೆಸಿ ಮಾಹಿತಿ ನೀಡಬೇಕು ಎಂದು ತಹಶೀಲ್ದಾರರಿಗೆ ಸೂಚಿಸಿದರು.

ಮಾರ್ಚ್ 6ರಿಂದ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಸಂಚರಿಸಲಿರುವ ಕಾವೇರಿ ತೇರನ್ನು ಸ್ವಾಗತಿಸಲು ಹಾಗೂ ವಿವಿಧ ಕನ್ನಡಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಬೇಕು. ಕಾವೇರಿ ತೇರು ಜಿಲ್ಲೆಯ 38 ಗ್ರಾಮ ಪಂಚಾಯ್ತಿಗಳಲ್ಲಿ ಸಂಚರಿಸಲಿದ್ದು, ಆಯಾಯ ದಿನಗಳಲ್ಲಿ ಸ್ಥಳೀಯ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರೂ ಸೇರಿದಂತೆ ಪಿಡಿಓಗಳು, ಕಂದಾಯ ಇಲಾಖೆ ಅಧಿಕಾರಿಗಳು ಎಲ್ಲಾ ರೀತಿಯ ಸಹಕಾರ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕೃಷ್ಣಪ್ಪ ಮಾತನಾಡಿ, ಕಾವೇರಿ ತೇರು ಸಂಚರಿಸಲಿರುವ ವೇಳೆ ಆಯಾಯ ತಾಲ್ಲೂಕುಗಳಲ್ಲಿ ಸ್ಥಳೀಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳೂ ಸೇರಿದಂತೆ ತಾ.ಪಂ. ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲು ಸೂಚನೆ ನೀಡಲಾಗುವುದು ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಕೆ. ಅಣ್ಣಿಗೇರಿ ಮಾತನಾಡಿ, ಜಿಲ್ಲೆಯಲ್ಲಿ ಕಾವೇರಿ ತೇರು ತೆರಳುವ ಸಂದರ್ಭದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗುವುದು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಚಂದ್ರೇಗೌಡ, ಉಪ ವಿಭಾಗಾಧಿಕಾರಿ ಡಾ.ಎಂ.ಆರ್. ರವಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಟಿ.ಪಿ. ರಮೇಶ್, ತಾಲ್ಲೂಕು ಕಸಾಪ ಅಧ್ಯಕ್ಷ ಕೆ.ಟಿ. ಬೇಬಿಮ್ಯಾಥ್ಯೂ, ವಿಶ್ವ ಕನ್ನಡ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಸೂಕ್ತ ಸಲಹೆ ನೀಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವಿನೋದ್ಚಂದ್ರ, ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.