ಪೂರ್ಣಗೊಂಡರೂ ಉದ್ಘಾಟನೆ ಭಾಗ್ಯವಿಲ್ಲ..
ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ 4.2 ಕೋಟಿ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಿ ಕಾವೇರಿ ನೀರಾವರಿ ನಿಗಮದ ಕಚೇರಿಗಾಗಿ ಸುಸಜ್ಜಿತ ಕಟ್ಟಡ ನಿರ್ಮಿಲಾಗಿದೆ. ಆದರೆ, ಕಾಮಗಾರಿ ಪೂರ್ಣಗೊಂಡು ಆರು ತಿಂಗಳು ಕಳೆದರೂ ಉದ್ಘಾಟನೆ ಭಾಗ್ಯ ದೊರೆತಿಲ್ಲ.
ಅದರ ಪಕ್ಕದಲ್ಲಿಯೇ ಲೋಕೋಪಯೋಗಿ ಇಲಾಖೆಗಾಗಿ ಕಚೇರಿಯೊಂದನ್ನು ಇದೇ ಸಂದರ್ಭದಲ್ಲಿ ನಿರ್ಮಿಸಲಾಗಿತ್ತು. ಅಲ್ಲಿ ಲೋಕೋಪಯೋಗಿ ಇಲಾಖೆ ಕಚೇರಿ ಕಾರ್ಯಾರಂಭಿಸಿ, ವರ್ಷವಾಗುತ್ತಾ ಬಂದಿದೆ. ಆ ಭಾಗ್ಯ, ಕಾವೇರಿ ನೀರಾವರಿ ನಿಗಮದ ಕಚೇರಿಗೆ ಸಿಕ್ಕಿಲ್ಲ.
ಈಗಿರುವ ಕಾವೇರಿ ನೀರಾವರಿ ನಿಗಮದ ಕಚೇರಿ ಬಹಳ ಹಳೆಯದಾಗಿದೆ. ಸುಸಜ್ಜಿತವಾದ ಕಟ್ಟಡ ಬೇಕು ಎನ್ನುವ ಕಾರಣಕ್ಕೆ ಹೊಸ ಕಟ್ಟಡವನ್ನು ನಿರ್ಮಿಸಲಾಗಿದೆ. ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡದ ನಡುವಿರುವ ಅಂಗಳದಲ್ಲಿ ಗಿಡಗಳನ್ನೂ ಬೆಳೆಸಲಾಗಿದೆ. ಸುಣ್ಣ-ಬಣ್ಣವನ್ನೂ ಬಳೆಯಲಾಗಿದೆ.
ಕಟ್ಟಡ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಮುಗಿಯುವುದು ಕಷ್ಟ. ಆದರೆ, ಇಲ್ಲಿ ಕಾಮಗಾರಿ ಪೂರ್ಣಗೊಂಡಿರುವ ಕಟ್ಟಡವನ್ನು ಬಳಸಿಕೊಳ್ಳದೆ ಹಾಗೆಯೇ ಬಿಡಲಾಗಿದೆ. ಕೋಟ್ಯಂತರ ರೂಪಾಯಿ ಸುರಿದು ಪ್ರಯೋಜನವಿಲ್ಲದಂತಾಗಿದೆ. ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಉದ್ಘಾಟನೆಗೆ ಮುಖ್ಯಮಂತ್ರಿಗಳು ಬರಬೇಕು ಎನ್ನುವ ಕಾರಣಕ್ಕೆ ಇನ್ನೂ ಕಚೇರಿ ಅಲ್ಲಿ ಆರಂಭಿಸಲು ಸಾಧ್ಯವಾಗಿಲ್ಲ ಎನ್ನುತ್ತಾರೆ ಹೆಸರು ಹೇಳಲಿಚ್ಛಿಸಿದ ಅಧಿಕಾರಿಯೊಬ್ಬರು.
ನಾಲ್ಕು ತಿಂಗಳ ಹಿಂದೆ ನೂತನ ಕಟ್ಟಡದ ಉದ್ಘಾಟನೆವಿಷಯ ಚರ್ಚೆಗೆ ಬಂದಿತ್ತು. ಆಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಆರ್. ಅಶೋಕ್ ಅವರು, ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದ್ದರು. ಅಷ್ಟರಲ್ಲೇ, ಅವರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬಿಡುಗಡೆಗೊಂಡರು.ಹೀಗಾಗಿ, ಉದ್ಘಾಟನೆ ಪ್ರಕ್ರಿಯೆ ಅಲ್ಲಿಗೆ ನಿಂತಿತ್ತು.
ನಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಿ.ಪಿ. ಯೋಗೇಶ್ವರ್ ಅಧಿಕಾರವಹಿಸಿಕೊಂಡರು. ಆಗಸ್ಟ್ನಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಂದ ಉದ್ಘಾಟನೆ ಮಾಡಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಕಾವೇರಿ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಮತ್ತೆ ಮುಂದಕ್ಕೆ ಹೋಯಿತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.