ಗುರುವಾರ , ಜೂನ್ 24, 2021
28 °C
21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಸಾಂಸ್ಕೃತಿಕ ಸ್ಪರ್ಧೆ

ಪೂರ್ಣಪ್ರಜ್ಞ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ರಹ್ಮಾವರ: ನಗರದ ಎಸ್.ಎಂ.ಎಸ್ ಕಾಲೇಜಿನಲ್ಲಿ ಸ್ವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ೨೧ ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಉಡುಪಿ ಹಾಗೂ ಬೆಳ್ಳಿ ಹಬ್ಬವನ್ನು ಆಚರಿಸುತ್ತಿರುವ ೩ ಬಿ/೨೧ ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಜಂಟಿಯಾಗಿ ಆಯೋಜಿಸಿದ್ದ ಪರೀಕ್ಷಣ್ ೨೦೧೪ - ಪಥ ಸಂಚಲನ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ತಂಡ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.ಉಡುಪಿಯ ಎಂ.ಜಿ.ಎಂ ಕಾಲೇಜಿನ ತಂಡ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.

ಸಮೂಹ ನೃತ್ಯ, ತಂಡ ಪಥಸಂಚಲನ, ಸಮೂಹ ಗಾಯನ, ಬೆಸ್ಟ್‌ ಕೆಡೆಟ್‌ ಸ್ಪರ್ಧೆಗಳಲ್ಲಿ ಉಡುಪಿ ಹಾಗೂ ಚಿಕ್ಕಮಗಳೂರಿನ ಒಟ್ಟು ೭ ಕಾಲೇಜಿನ ಎನ್.ಸಿ.ಸಿ. ತಂಡಗಳು ಭಾಗವಹಿಸಿದ್ದವು.ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಸಂಚಾಲಕ ಲಾರೆನ್ಸ್ ಡೇವಿಡ್ ಕ್ರಾಸ್ತಾ,  ಉಪನ್ಯಾಸಕಿ ಪ್ರತಿಭಾ ಪಟೇಲ್, ಕರ್ನ್‌ಲ್ ಬಿ.ಎಸ್.ಗಿವಾರಿ, ಪ್ರಾಂಶುಪಾಲ ಪ್ರೊ. ಕೆ.ನಾರಾಯಣನ್, ಉಪ ಪ್ರಾಂಶುಪಾಲ ಡಾ.ಎಚ್.ವಿ.ಸೋಮಯಾಜಿ,  ಎಸ್.ಸಿ.ಯು.ಓ. ಸುನಿಲ್ ಕುಮಾರ್ ಕೆ, ಸುಬೇದಾರ್ ಮೇಜರ್ ಪಂಪನ್ ಎಚ್.ಟಿ ಮತ್ತಿತರರು ಇದ್ದರು. ಕಾರ್ಯಕ್ರಮದಲ್ಲಿ ೨೫ ವರ್ಷಗಳ ತನಕ ಎನ್.ಸಿ.ಸಿ  ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಮೆೇಜರ್ ಜಿ.ಬಾಲಕೃಷ್ಣ ಶೆಟ್ಟಿ ಮತ್ತು ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ ಸಿನಿಯರ್ ಕೆಡೆಟ್ ಅಂಡರ್ ಆಫೀಸರ್ ಸಂಪನ್ ಎಚ್.ಟಿ ಅವರನ್ನು ಎಸ್.ಎಮ್.ಎಸ್. ಕಾಲೇಜಿನ ಎನ್.ಸಿ.ಸಿ ವತಿಯಿಂದ ಸನ್ಮಾನಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.