ಸೋಮವಾರ, ಮೇ 16, 2022
27 °C

ಪೂರ್ಣಪ್ರಜ್ಞ ವಿದ್ಯಾರ್ಥಿಗಳಿಂದ ಪ್ರತಿಜ್ಞೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜೀವನವನ್ನೇ ನಾಶಗೊಳಿಸುವಂತಹ ಅಪಾಯಕಾರಿ ಮಾದಕ ವ್ಯಸನಗಳಿಂದ ಯುವಜನತೆ ಮತ್ತು ವಿದ್ಯಾರ್ಥಿಗಳು ದೂರ ಇರಬೇಕು. ಸದೃಢ ಸಮಾಜ ನಿರ್ಮಾಣದ ಜವಾಬ್ದಾರಿಯನ್ನು ಯುವಜನರು ವಹಿಸಬೇಕು' ಎಂದು ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿಯ ನಿರ್ದೇಶಕ ಡಾ. ಶರತ್ ರಾವ್ ಹೇಳಿದರು.ಪೂರ್ಣಪ್ರಜ್ಞ ಕಾಲೇಜು ಮತ್ತು 21ನೇ ಕರ್ನಾಟಕ ಎನ್‌ಸಿಸಿ ಬೆಟಾಲಿಯನ್ ಸಂಯುಕ್ತವಾಗಿ  ಪೂರ್ಣಪ್ರಜ್ಞ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ತಾವಷ್ಟೇ ಮಾದಕ ದ್ರವ್ಯಗಳಿಂದ ದೂರವಿರುವುದಲ್ಲದೆ ತಮ್ಮ ಸುತ್ತಮುತ್ತ ಇರುವವರು ಅಂತಹ ವ್ಯಸನಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.21ನೇ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿಯ ಕಮಾಂಡಿಂಗ್ ಆಧಿಕಾರಿ ಬಿ.ಎಸ್.ಘಿವಾರಿ  ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು.ಕಾಲೇಜಿನ ಪ್ರಾಂಶುಪಾಲ ಕೆ. ಸದಾಶಿವ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಿವಕುಮಾರ್, ಡಾ.ಸುಕನ್ಯ ಮಾರ್ಟಿಸ್ ಮತ್ತಿತರರು ಉಪಸ್ಥಿತರಿದ್ದರು. ಕಾಲೇಜಿನ ಎನ್.ಸಿ.ಸಿ. ಅಧಿಕಾರಿ ಪ್ರಕಾಶ್ ರಾವ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.