ಶನಿವಾರ, ಮೇ 15, 2021
23 °C

ಪೃಥ್ವಿ-2 ಕ್ಷಿಪಣಿ ಪರೀಕ್ಷೆ ಯಶಸ್ವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭುವನೇಶ್ವರ: ನೆಲದಿಂದ ನೆಲಕ್ಕೆ ಚಿಮ್ಮುವ 350 ಕಿ.ಮೀ ವ್ಯಾಪ್ತಿಯಲ್ಲಿ ದಾಳಿ ನಡೆಸಬಲ್ಲ ಪೃಥ್ವಿ-2 ಕ್ಷಿಪಣಿಯ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಅಣ್ವಸ್ತ್ರ ಸಾಗಿಸಬಲ್ಲ, ಸ್ವದೇಶಿ ತಂತ್ರಜ್ಞಾನದಲ್ಲಿ ನಿರ್ಮಿಸಲಾಗಿರುವ  ಒಂಬತ್ತು ಮೀಟರ್ ಉದ್ದದ ಕ್ಷಿಪಣಿಯ ಪರೀಕ್ಷೆಯನ್ನು ಸೋಮವಾರ ಒಡಿಶಾದ ಬಾಲಸೋರ್ ಜಿಲ್ಲೆಯ ಚಂಡೀಪುರದಲ್ಲಿರುವ ಮಧ್ಯಂತರ ಪರೀಕ್ಷಾ ವಲಯದಲ್ಲಿ (ಐಟಿಆರ್) ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.ನಿಯಮಿತವಾಗಿ ನಡೆಯುವ ತರಬೇತಿ ಕಾರ್ಯಕ್ರಮದ ಭಾಗವಾಗಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ನೆರವಿನೊಂದಿಗೆ ಸಶಸ್ತ್ರ ಪಡೆಗಳು ಕ್ಷಿಪಣಿಯ ಪರೀಕ್ಷೆ ನಡೆಸಿದವು.`ಕ್ಷಿಪಣಿಯು ಪೂರ್ವನಿರ್ಧಾರಿತ ವಾಗಿ ಬಂಗಾಳಕೊಲ್ಲಿಯ ವ್ಯಾಪ್ತಿಯಲ್ಲಿ ಗುರುತಿಸಲಾಗಿದ್ದ ಗುರಿಯನ್ನು ಹೆಚ್ಚಿನ ನಿಖರತೆಯಿಂದ ತಲುಪಿತು. ಪರೀಕ್ಷೆಯ ಎಲ್ಲಾ ಉದ್ದೇಶಗಳನ್ನು ಪೂರೈಸಿದ ಕ್ಷಿಪಣಿಯು ಕರಾರುವಕ್ಕಾಗಿ ತನ್ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿತು~ ಎಂದು ಐಟಿಆರ್ ನಿರ್ದೇಶಕ ಎಸ್‌ಪಿ.ದಾಸ್ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.