ಪೆಟ್ರೋಲ್‌ಬಂಕ್ ಎಂದಿನಂತೆ ಕಾರ್ಯ

7

ಪೆಟ್ರೋಲ್‌ಬಂಕ್ ಎಂದಿನಂತೆ ಕಾರ್ಯ

Published:
Updated:
ಪೆಟ್ರೋಲ್‌ಬಂಕ್ ಎಂದಿನಂತೆ ಕಾರ್ಯ

ಬೆಂಗಳೂರು: ಅಪೂರ್ವ ಚಂದ್ರ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರುವಲ್ಲಿ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಸೋಮವಾರದಿಂದ (ಅ.15) ಒಂದು ಪಾಳಿಯಲ್ಲಿ ಕೆಲಸ ಮಾಡಲು ನಿರ್ಧರಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.`ರಾಜ್ಯದ ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ನಮ್ಮ ನಿರ್ಧಾರಕ್ಕೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಒಂದು ಪಾಳಿಯಲ್ಲಿ ಕೆಲಸ ನಿರ್ವಹಿಸುವ ನಿರ್ಧಾರವನ್ನು ಕೈಬಿಡಲಾಗಿದೆ. ಮಂಗಳವಾರದಿಂದ ಪೆಟ್ರೋಲ್ ಬಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ~ ಎಂದು ಬೆಂಗಳೂರು ಪೆಟ್ರೋಲ್ ವಿತರಕರ ಸಂಘದ ಅಧ್ಯಕ್ಷ ಬಿ.ಆರ್.ರವೀಂದ್ರನಾಥ್ ಅವರು `ಪ್ರಜಾವಾಣಿ~ಗೆ ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry