ಬುಧವಾರ, ನವೆಂಬರ್ 20, 2019
25 °C

ಪೆಟ್ರೋಲ್ ದರ ರೂ. 1 ಕಡಿತ

Published:
Updated:

ನವದೆಹಲಿ (ಪಿಟಿಐ): ಸರ್ಕಾರಿ ಸೌಮ್ಯದ ತೈಲ ಮಾರಾಟ ಕಂಪೆನಿಗಳು ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ದರವನ್ನು ಲೀಟರ್‌ಗೆ ರೂ. 1 ಕಡಿತಗೊಳಿಸಿವೆ.ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ದರದಲ್ಲಿ ಅಲ್ಪ ಮಟ್ಟದಲ್ಲಿ  ಕಡಿತಗೊಳ್ಳುತ್ತಿರುವುದು ಇದು ಮೂರನೇ ಬಾರಿಯಾಗಿದೆ.ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಸಲ್ಪ ಮಟ್ಟದಲ್ಲಿ ಇಳಿಕೆಯಾಗಿರುವುದರಿಂದ ಪೆಟ್ರೋಲ್ ಲೀಟರ್ ದರದಲ್ಲಿ ರೂ. 1 ಕಡಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)