ನವದೆಹಲಿ (ಪಿಟಿಐ): ಅಂತರರಾಷ್ಟ್ರೀಯ ತೈಲ ಬೆಲೆಯಲ್ಲಿ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 95 ಪೈಸೆಯಷ್ಟು ಕಡಿಮೆಯಾಗಿದೆ. ಗುರುವಾರ ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿಗೆ ಬಂದಿದೆ.

ಅಕ್ಟೋಬರ್ ತಿಂಗಳಿನಿಂದ ನಡೆದ ಎರಡನೇ ಇಳಿಕೆ ಇದಾಗಿದ್ದು, ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ಗ್ರಾಹಕರಿಗೆ ತುಸು ಸಮಾಧಾನ ಸಿಕ್ಕಂತಾಗಿದೆ. ಅಕ್ಟೋಬರ್ 9ರಂದು ಪೆಟ್ರೋಲ್ ಬೆಲೆಯಲ್ಲಿ 56 ಪೈಸೆಯಷ್ಟು ಇಳಿಕೆಯಾಗಿತ್ತಾದರೂ, ಪೆಟ್ರೋಲ್ ಪಂಪ್ ಡೀಲರ್ಗಳಿಗೆ ನೀಡುವ ಕಮಿಷನ್ ದರವನ್ನು ಹೆಚ್ಚಿಸುವ ಸರ್ಕಾರದ ನಿರ್ಧಾರದಿಂದಾಗಿ ಮತ್ತೆ 29 ಪೈಸೆ ಹೆಚ್ಚಳಗೊಂಡಿತ್ತು.

ಸ್ಥಳೀಯ ಮಾರಾಟ ತೆರಿಗೆ ಅಥವಾ `ವ್ಯಾಟ್~ನಿಂದಾಗಿ ನಗರದಿಂದ ನಗರಕ್ಕೆ ಬೆಲೆಯಲ್ಲಿ ವ್ಯತ್ಯಾಸ ಕಂಡುಬರಲಿದೆ.

`ಸದ್ಯದ ಪರಿಸ್ಥಿತಿಯಲ್ಲಿ ಅಂತರರಾಷ್ಟ್ರೀಯ ತೈಲ ಬೆಲೆ ಸ್ಥಿರವಾಗಿದೆ. ಆದರೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದ್ದು, ಭವಿಷ್ಯದಲ್ಲಿಯೂ ಅನಿಶ್ಚಿತತೆ ಮುಂದುವರಿಯಲಿದೆ. ಅಂತರರಾಷ್ಟ್ರೀಯ ತೈಲ ಮಾರುಕಟ್ಟೆ ಮತ್ತು ರೂಪಾಯಿ-ಡಾಲರ್ ವಿನಿಮಯ ಮೌಲ್ಯದಲ್ಲಿ ಕಂಡುಬರುತ್ತಿರುವ ಏರುಪೇರುಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದ್ದು ಭವಿಷ್ಯದ ದರದ ಮೇಲೂ ಇದು ಪ್ರತಿಫಲನಗೊಳ್ಳಲಿದೆ~ ಎಂದು ಇಮಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ.

ಕೇಂದ್ರ ಸರ್ಕಾರ 2010 ಜೂನ್ ತಿಂಗಳಲ್ಲಿ ಪೆಟ್ರೋಲ್ ಬೆಲೆಯನ್ನು ನಿಯಂತ್ರಣ ಮುಕ್ತಗೊಳಿಸುವ ಮೂಲಕ ಮುಕ್ತ ತೈಲ ಮಾರುಕಟ್ಟೆಯಲ್ಲಿನ ಏರಿಳಿತಗಳಿಗೆ ಅನುಗುಣವಾಗಿ ಬೆಲೆ ನಿರ್ಧರಿಸುವ ಸಂಪೂರ್ಣ ಅಧಿಕಾರವನ್ನು ತೈಲ ಕಂಪೆನಿಗಳಿಗೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.