ರಾಯಚೂರು: ಪೆಟ್ರೋಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಬಿಜೆಪಿ ಗ್ರಾಮೀಣ ಘಟಕದ ನೇತೃತ್ವದಲ್ಲಿ ಶುಕ್ರವಾರ ಯರಗೇರಾ ಗ್ರಾಮದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಬಗ್ಗೆ ಯರಗೇರಾ ಗ್ರಾಮದ ನಾಡ ತಹಸೀಲ್ದಾರ ಕಚೇರಿಯ ಅಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಕೇಂದ್ರದ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದ ಬಡ ಜನರ ಮೇಲೆ ಒಂದಿಲ್ಲೊಂದು ರೀತಿಯಲ್ಲಿ ಬೆಲೆ ಏರಿಕೆ ಹೇರುತ್ತಿದೆ ಎಂದು ದೂರಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ರೈತರು, ಮಧ್ಯಮ ವರ್ಗದ ಜನರನ್ನು ಸಂಕಷ್ಟಕ್ಕೀಡು ಮಾಡಲಾಗುತ್ತಿದೆ. ಆಹಾರ ಪದಾರ್ಥಗಳು, ತರಕಾರಿ ದಿನಬಳಕೆ ವಸ್ತುಗಳ ಮೇಲೆ ನಿಯಂತ್ರಣ ಸಾಧಿಸದೇ ಕಾಳಸಂತೆ ಕೋರರ ಹಿಡಿತಕ್ಕೆ ಸಿಲುಕಿ ಕಾಂಗ್ರೆಸ್ ಜನವಿರೋಧಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಶಿವರಾಜ ಮರ್ಚೆಟಹಾಳ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಪವನ ಪಾಟೀಲ್, ಪ್ರಧಾನ ಕಾರ್ಯದರ್ಶಿ ರಾಜಶೇಖರ ಪಾಟೀಲ್, ಗ್ರಾಮೀಣ ಘಟಕ ಪ್ರಧಾನ ಕಾರ್ಯದರ್ಶಿ ಎ.ಬಸವರಾಜ, ಉಪಾಧ್ಯಕ್ಷ ನಾರಾಯಣ, ಕರುಣಾಕರ ರೆಡ್ಡಿ, ನಾಗನಗೌಡ, ವೆಂಕಟೇಶ ಕಮಲಾಪುರ, ಹರಿಶ್ಚಂದ್ರರೆಡ್ಡಿ, ಪ್ರಹ್ಲಾದ್ ಆಚಾರ, ರವಿರಾಜಗೌಡ, ಶರಣಬಸವ, ಮಾರಪ್ಪ ಯರಗೇರಾ, ಮಾರೆಪ್ಪ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.