ಮಂಗಳವಾರ, ಡಿಸೆಂಬರ್ 10, 2019
26 °C

ಪೇಶಾವರ ಚರ್ಚ್ ಮೇಲೆ ಬಾಂಬ್ ದಾಳಿ: 60 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೇಶಾವರ ಚರ್ಚ್ ಮೇಲೆ ಬಾಂಬ್ ದಾಳಿ: 60 ಸಾವು

ಇಸ್ಲಾಮಾಬಾದ್ (ಪಿಟಿಐ):  ಪಾಕ್‌ನ   ಪೇಶಾವರದಲ್ಲಿನ ಐತಿಹಾಸಿಕ ಕ್ರೈಸ್ತ ಚರ್ಚ್ ಮೇಲೆ ಭಾನುವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 60 ಜನರು ಮೃತಪಟ್ಟಿದ್ದಾರೆ ಎಂದು ಪಾಕ್ ಪೊಲೀಸರು ತಿಳಿಸಿದ್ದಾರೆ.ಇಲ್ಲಿನ ಚರ್ಚ್‌ನಲ್ಲಿ ಪ್ರಾರ್ಥನೆ ನಡೆಯುವ ಸಂದರ್ಭದಲ್ಲಿ ಇಬ್ಬರು ಆತ್ಮಾಹುತಿ ಬಾಂಬರ್‌ಗಳು ದಾಳಿ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಪ್ರಾರ್ಥನೆ ಸಮಯದಲ್ಲಿ 700ಕ್ಕೂ ಹೆಚ್ಚು ಜನರು ನೆರೆದಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 60 ಜನರು ಸಾವನ್ನಪ್ಪಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.ಸ್ಫೋಟದ ತೀವ್ರತೆಗೆ ಚರ್ಚ್‌ನ ಗೋಡೆಗಳು ಜಖಂ ಗೊಂಡಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)