ಮಂಗಳವಾರ, ಮೇ 11, 2021
27 °C

ಪೈಕಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಳಿಯಾಳ: ಗ್ರಾಮೀಣ ಮಟ್ಟದ ಕ್ರೀಡಾಪಟುಗಳ ಉತ್ತೇಜನಕ್ಕಾಗಿ ಪೈಕಾ ಕ್ರೀಡಾಕೂಟವನ್ನು ಸರಕಾರ ನಡೆಸುತ್ತಿದೆ. ಗ್ರಾಮೀಣ ಭಾಗದ ಪ್ರತಿಯೊಬ್ಬ ವಿದ್ಯಾರ್ಥಿಯು ಪೈಕಾ ಕ್ರೀಡಾಕೂಟದಲ್ಲಿ ಭಾಗವಹಿಸಬೇಕೆಂದು ಶಾಸಕ ಸುನೀಲ ಹೆಗಡೆ ಹೇಳಿದರು.



ಗುರುವಾರ  ಸ್ಥಳೀಯ ತಾಲ್ಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ತಾಲ್ಲೂಕು ಯುವ ಒಕ್ಕೂಟದ ಆಶ್ರಯದಲ್ಲಿ ಹಳಿಯಾಳ ತಾಲ್ಲೂಕು ಮಟ್ಟದ 2011-12 ನೇ ಸಾಲಿನ `ಪೈಕಾ~ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.



ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೆಕರ್, ಸರಕಾರ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಬೇಕೆಂದು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದರೂ ಸಹ ಗ್ರಾಮೀಣ ಮಟ್ಟದ ಕ್ರೀಡೆಗಳು ನಶಿಸುತ್ತಾ ಇವೆ. ಗ್ರಾಮೀಣ ಮಟ್ಟದ ಕ್ರೀಡೆಗಳನ್ನು ಪ್ರೋತ್ಸಾಹಿಸಬೇಕು.



ವಿದ್ಯಾರ್ಥಿಗಳು ದೈಹಿಕವಾಗಿ ಸದೃಢವಾದರೆ ಶೈಕ್ಷಣಿಕ ವಾಗಿಯೂ ಸಹ ಬಲಾಢ್ಯವಾಗಲೂ ಸಾಧ್ಯ. ಹಳಿಯಾಳ ತಾಲ್ಲೂಕಿನ ಕ್ರೀಡಾ ಪಟುಗಳು ರಾಷ್ಟ್ರ ಮಟ್ಟದಲ್ಲಿ ಕ್ರೀಡೆಯಲ್ಲಿ ಭಾಗಿಗಳಾದರೆ ತಾವು ವೈಯಕ್ತಿಕವಾಗಿ ಬಹುಮಾನ ನೀಡುತ್ತೇನೆ ಎಂದು ಹೇಳಿದರು.ತಾ.ಪಂ. ಅಧ್ಯಕ್ಷ ದೇಮಣ್ಣಾ ಕರ್ಜಗಿ ಅಧ್ಯಕ್ಷತೆ ವಹಿಸಿದ್ದರು.



ವೇದಿಕೆಯಲ್ಲಿ ಕಾರ್ಯ ನಿರ್ವಹಣಾಧಿಕಾರಿ ಸಿ.ಎಸ್. ಚಿಕ್ಕಮಠ, ಜಿ.ಪಂ. ಸದಸ್ಯರಾದ ನಂದಾ ಕೊರ್ವೆಕರ, ಕೃಷ್ಣ ಪಾಟೀಲ, ರೇಣುಕಾ ತಾಂಬಿಟಕರ, ತಾ.ಪಂ. ಸದಸ್ಯೆ ನಂದಾ ಗಂಗಾಧರ, ಚಂದ್ರಕಲಾ ಪಾಟೀಲ ಮತ್ತಿತರರಿದ್ದರು.



ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಭಾಗವಹಿಸಿದ ಕುಸ್ತಿ, ಕಬಡ್ಡಿ, ಅಥ್ಲೆಟಿಕ್, ಖೋ-ಖೋ ಕ್ರೀಡಾ ಪಟುಗಳಿಗೆ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಕ್ರೀಡಾ ಸಮವಸ್ತ್ರ ವಿತರಿಸಿದರು.



ಕುಸ್ತಿ ತರಬೇತುದಾರ ಮಂಜುನಾಥ ಸ್ವಾಗತಿಸಿದರು. ಮೇಘರಾಜ ಮೇತ್ರಿ ನಿರೂಪಿಸಿದರು. ಎಸ್.ಬಿ. ಮಿರಾಶಿ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.