ಪೊಲೀಸರಿಂದ ಅಡ್ಡಿ: ಶೀಲಾ ದೀಕ್ಷಿತ್ ದೂರು

7

ಪೊಲೀಸರಿಂದ ಅಡ್ಡಿ: ಶೀಲಾ ದೀಕ್ಷಿತ್ ದೂರು

Published:
Updated:

ನವದೆಹಲಿ (ಪಿಟಿಐ): ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದು `ಯುವತಿಯ ಹೇಳಿಕೆ ದಾಖಲಿಸಲು ಪೊಲೀಸರು ಅಡ್ಡಿಪಡಿಸಿದ್ದಾರೆಂದು ದೂರಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್  ಗೃಹ ಸಚಿವಾಲಯಕ್ಕೆ ಪತ್ರ ಬರೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.ಯುವತಿಯ ಹೇಳಿಕೆ ದಾಖಲಿಸಲು ಆಸ್ಪತ್ರೆಗೆ ತೆರಳಿದ್ದ ದೆಹಲಿ ಉಪ ವಿಭಾಗಿಯ ನ್ಯಾಯಾದೀಶರಾದ ಉಷಾ ಚರ್ತುವೇದಿ ಅವರಿಗೆ ಪೊಲೀಸರು ಅಡ್ಡಿ ಪಡಿಸಿದ್ದಾರೆಂದು ಆರೋಪಿಸಿ ಶೀಲಾ ದೀಕ್ಷಿತ್ ಪತ್ರ ಬರೆದಿದ್ದಾರೆ.ಈ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಲು ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಆದೇಶಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry