ಗುರುವಾರ , ಜುಲೈ 29, 2021
22 °C

ಪೊಲೀಸರಿಂದ ಕಿರಿಕಿರಿ ಆರೋಪ: ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರದ ದ್ವಿಚಕ್ರವಾಹನ ಹಾಗೂ ಆಟೊರಿಕ್ಷಾಗಳ ದಾಖಲಾತಿ ಸರಿಪಡಿಸಿಕೊಳ್ಳಲು ವಾಹನ ಚಾಲಕರಿಗೆ ಹಾಗೂ ಮಾಲೀಕರಿಗೆ ಕಾಲಾವಕಾಶ ನೀಡಲು ಸಂಚಾರ ವಿಭಾಗದ ಪೊಲೀಸರಿಗೆಸೂಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಜಿಲ್ಲಾ ಘಟಕದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದಲ್ಲಿ ವಾಹನಗಳ ದಾಖಲಾತಿ ಪರಿಶೀಲನೆ ಕಾರ್ಯಾಚರಣೆ ನಡೆಸುವ ಮುನ್ನ ಚಾಲಕರಿಗೆ ಹಾಗೂ ಮಾಲೀಕರಿಗೆ ಯಾವುದೇ ರೀತಿಯ ಮಾಹಿತಿ ನೀಡದೇ ದಿಢಿ ೀರನೆ ಪರಿಶೀಲನೆ ಮಾಡುತ್ತಿರುವುದು ಖಂಡನೀಯ ಎಂದು ಹೇಳಿದರು.ಹೊಟ್ಟೆಪಾಡಿಗಾಗಿ ಆಟೊ ಬಾಡಿಗೆಗೆ ಪಡೆದು ಓಡಿಸಿ ಜೀವನ ನಡೆಸುವ ಚಾಲಕರಿಗೆ ತೊಂದರೆಯಾಗಿದೆ. 100 ರೂಪಾಯಿ ದುಡಿಯುವ ಇವರಿಗೆ ವಾಹನ ದಾಖಲಾತಿ ತಪಾಸಣೆಯಲ್ಲಿ ಒಂದು ಸಾವಿರ ರೂಪಾಯಿವರೆಗೆ ದಂಡ ವಿಧಿಸುತ್ತಿರುವುದರಿಂದ ಆಟೊ ಚಾಲಕರ ದುಡಿಮೆಯ ಹಣವೆಲ್ಲ ನೀಡಿದರೂ ದಂಡಕಟ್ಟಲು ಸಾಕಾಗುವುದಿಲ್ಲ. ಇದರಿಂದ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ವಾಹನಗಳ ದಾಖಲಾತಿ ಪರಿಶೀಲನೆ ಬಗ್ಗೆ ಚಾಲಕರಿಗೆ ಹಾಗೂ ಮಾಲೀಕರಿಗೆ ಮೂರು ತಿಂಗಳ ಕಾಲಾವಕಾಶವನ್ನು ನೀಡಬೇಕು, ವಾಹನಗಳಿಗೆ ಸಂಬಂಧಿಸಿದ ದಾಖಲಾತಿಗಳನ್ನು ಇಡುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಕೋರಿದರು.ದಂಡ ರೂಪದಲ್ಲಿ ಹೆಚ್ಚಿನ ಹಣ ವಸೂಲಿ ಮಾಡದಂತೆ ತಡೆಗಟ್ಟಬೇಕು,  ಆಟೊಚಾಲಕರಿಗೆ ಸರಿಯಾದ ಕಾನೂನು ಮಾಹಿತಿ ನೀಡಬೇಕು ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ವಿನೋದರೆಡ್ಡಿ ಮನವಿಯಲ್ಲಿ ತಿಳಿಸಿದ್ದಾರೆ. ವೀರೇಶ ಏಗನೂರು, ಸಿದ್ಧರಾಮ ಸಿಂಧೆ, ವೆಂಕಟೇಶ, ರಾಜು ಮತ್ತಿತರರು ಪಾಲ್ಗೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.