ಭಾನುವಾರ, ಮೇ 16, 2021
28 °C

ಪೊಲೀಸರು- ನಕ್ಸಲರ ಗುಂಡಿನ ಚಕಮಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳ್ತಂಗಡಿ: ತಾಲ್ಲೂಕಿನ ಕುತ್ಲೂರು ಸಮೀಪದ ಪಂಜಳಬೆಟ್ಟ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಸಂಜೆ ಮತ್ತೆ ನಕ್ಸಲರು ಪ್ರತ್ಯಕ್ಷರಾಗಿದ್ದು, ನಕ್ಸಲ್ ನಿಗ್ರಹ ಪಡೆಯತ್ತ (ಎಎನ್‌ಎಫ್) ಗುಂಡು ಹಾರಿಸಿದ್ದಾರೆ.ಸಂಜೆ 5.30ರಿಂದ 5.45ರ ನಡುವೆ ಈ ಘಟನೆ ನಡೆದಿದೆ. ಎಎಎನ್‌ಎಫ್ ಸಿಬ್ಬಂದಿ ಪ್ರತಿಯಾಗಿ ಗುಂಡು ಹಾರಿಸಿದಾಗ ನಕ್ಸಲರು ಕಾಡಿನಲ್ಲಿ ಪರಾರಿಯಾದರು.`ಎಎನ್‌ಎಫ್ ಸಿಬ್ಬಂದಿ ಎಂದಿನಂತೆ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದರು. ಪಂಜಳಬೆಟ್ಟು ಅರಣ್ಯ ಪ್ರದೇಶದಲ್ಲಿ ಆರು ಮಂದಿ ನಕ್ಸಲರು ಪೊಲೀಸರತ್ತ ಮೊದಲಾಗಿ ಗುಂಡು ಹಾರಿಸಿದರು. ಪ್ರತಿಯಾಗಿ ಪೊಲೀಸರೂ ಗುಂಡು ಹಾರಿಸಿದರು. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ~ ಎಂದು ಪಶ್ಚಿಮ ವಲಯದ ಐಜಿಪಿ ಪ್ರತಾಪ್ ರೆಡ್ಡಿ `ಪ್ರಜಾವಾಣಿ~ಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.