ಭಾನುವಾರ, ಏಪ್ರಿಲ್ 18, 2021
30 °C

ಪೊಲೀಸರ ಆದೇಶ ಉಲ್ಲಂಘಿಸಿ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ/ಐಎಎನ್‌ಎಸ್): ನಗರದಲ್ಲಿ ಆಗಸ್ಟ್ 11ರಂದು ನಡೆದ ಹಿಂಸಾಚಾರ ವಿರೋಧಿಸಿ ರ‌್ಯಾಲಿ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ ಹೊರತಾಗಿಯೂ ಮಹಾರಾಷ್ಟ್ರ ನವ ನಿರ್ಮಾಣ ಸೇನಾ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.ಅಜಾದ್ ಮೈದಾನದಲ್ಲಿ ಬಹಿರಂಗ ಸಭೆ ನಡೆಸಲು ಮಾತ್ರ ಎಂಎನ್‌ಎಸ್‌ಗೆ ಅನುಮತಿ ನೀಡಲಾಗಿತ್ತು. ಶಾಂತಿಗೆ ಭಂಗ ಬರುತ್ತದೆ ಎಂಬ ಕಾರಣಕ್ಕಾಗಿ ಮೆರವಣಿಗೆ ನಡೆಸಲು ಅವಕಾಶ ನೀಡಿರಲಿಲ್ಲ. ಗಿರಿಗಾಂವ್ ಚೌಪಟ್ಟಿಯಲ್ಲಿ ಸೇರಿದ್ದ ಸಾವಿರಾರು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ರಾಜ್ ಠಾಕ್ರೆ ನಂತರ ಮೆರವಣಿಗೆಯಲ್ಲಿ ಹೊರಟರೂ ಪೊಲೀಸರು ಅವರನ್ನು ತಡೆಯುವ ಸಾಹಸಕ್ಕೆ ಕೈಹಾಕಲಿಲ್ಲ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ.  ಅಜಾದ್ ಮೈದಾನದಲ್ಲಿ ಬಹಿರಂಗ ಸಭೆಯನ್ನು ಮಾತನಾಡಿದ ರಾಜ್ ಠಾಕ್ರೆ, ಆಗಸ್ಟ್ 11ರ ಹಿಂಸಾಚಾರಕ್ಕೆ ಬಾಂಗ್ಲಾ ವಲಸಿಗರೇ ಕಾರಣ ಎಂದು ಆರೋಪಿಸಿದರು. ಕಾಂಗ್ರೆಸ್-ಎನ್‌ಸಿಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಲು ಈ ಸಂದರ್ಭವನ್ನು ಬಳಸಿಕೊಂಡ ಅವರು, ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ವಿಫಲರಾದ ಗೃಹ ಸಚಿವ ಆರ್.ಆರ್.ಪಾಟೀಲ ಮತ್ತು ಪೊಲೀಸ್ ಆಯುಕ್ತ ಅರುಪ್ ಪಟ್ನಾಯಕ್ ಕೂಡಲೇ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.`ರಾಜ್ಯದ ಶಾಂತಿ ಕದಡುತ್ತಿರುವ ಹೊರಗಿನ ಶಕ್ತಿಗಳ ದುಷ್ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ನಮ್ಮ ಸಹನೆಯನ್ನು ಪರೀಕ್ಷಿಸಬೇಡಿ~ ಎಂದು ಅವರು ಎಚ್ಚರಿಕೆ ನೀಡಿದರು.  

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.