ಪೊಲೀಸರ ಬಲಿದಾನ ಸ್ಮರಣೆ

7

ಪೊಲೀಸರ ಬಲಿದಾನ ಸ್ಮರಣೆ

Published:
Updated:

ಚಿಕ್ಕಮಗಳೂರು:ಪೊಲೀಸರು ಸಾರ್ವಜನಿಕರೊಂದಿಗೆ ಬೆರೆತು ಸ್ಥೈರ್ಯ ಮತ್ತು ಧೈರ್ಯದಿಂದ ಕರ್ತವ್ಯ ನಿರ್ವಹಿಸಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಬಹುದು ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಅಭಿಪ್ರಾಯಪಟ್ಟರು.ಜಿಲ್ಲಾ ಪೊಲೀಸ್ ಇಲಾಖೆ ನಗರದ ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಶಸಸ್ತ್ರ ಮೀಸಲು ಪಡೆ ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಅವರು, ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿ ನಂತರ ಮಾತನಾಡಿದರು.ರಾಜ್ಯ ಮತ್ತು ರಾಷ್ಟ್ರದಲ್ಲಿ ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೊಲೀಸರನ್ನು ಪ್ರತಿಯೊಬ್ಬರು ಸ್ಮರಿಸಬೇಕು. ಪೊಲೀಸರ ನಿಸ್ವಾರ್ಥ ಬಲಿದಾನದಿಂದ ಇಂದು ನಮ್ಮ ಸಮಾಜದಲ್ಲಿ ಸುಭದ್ರತೆ ನೆಲೆಸಿದೆ ಎನ್ನುವುದನ್ನು ಯಾರೂ ಮರೆಯಬಾರದು ಎಂದರು.ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್, ರಾಷ್ಟ್ರದಾದ್ಯಂತ ಕರ್ತವ್ಯದಲ್ಲಿದಾಗ ವೀರ ಮರಣ ಅಪ್ಪಿದ ಪೊಲೀಸರ ಹೆಸರು ಗಳನ್ನು ಉಲ್ಲೇಖಿಸಿ, ಅವರ ತ್ಯಾಗ ಬಲಿದಾನ ಸ್ಮರಿಸಿದರು.ಜಿಲ್ಲಾಧಿಕಾರಿ ಎಸ್.ಟಿ.ಅಂಜನ್ ಕುಮಾರ್, ನಗರಸಭೆ ಅಧ್ಯಕ್ಷ ಸಿ.ಆರ್.ಪ್ರೇಮ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಶಿವಶಂಕರ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛವಿಟ್ಟು ನಮನ ಸಲ್ಲಿಸಿದರು. ಹುತಾತ್ಮ ಪೊಲೀಸರ ಗೌರವಾರ್ಥ ಶಸಸ್ತ್ರ ಪಡೆ ಪೊಲೀರು ಕುಶಾಲುತೋಪು ಸಿಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry