ಮಂಗಳವಾರ, ಮೇ 18, 2021
22 °C
ಕನಕಪುರ: ಅಕ್ರಮ ಮರಳು ಸಾಗಾಣಿಕೆ

ಪೊಲೀಸರ ಮೇಲೆ ಹಲ್ಲೆ: ಆರೋಪಿಗಳು ಪರಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಪುರ: ಅಕ್ರಮವಾಗಿ ಫಿಲ್ಟರ್ ಮರಳು ಸಾಗಾಣಿಕೆ ಮಾಡುತ್ತಿದ್ದ ಮರಳು ಲಾರಿಯನ್ನು ತಡೆಯಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಆರೋಪಿಗಳು ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಟಕನದೊಡ್ಡಿಯಲ್ಲಿ ನಡೆದಿದೆ. ತಾಲ್ಲೂಕಿನ ಹಾರೋಹಳ್ಳಿ ಪೊಲೀಸ್ ಠಾಣೆಯ ಪೇದೆಗಳಾದ ವಿನಯ್ ಮತ್ತು ವಸಂತದೊಡ್ಡಮನಿ ಹಲ್ಲೆಗೊಳಗಾದವರು. ಹಲ್ಲೆ ಮಾಡಿದವರು ಮುನೇಗೌಡ, ಗಿರಿ, ಮಂಜು ಎಂದು ತಿಳಿದು ಬಂದಿದೆ.ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಅವರು ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಎಲ್ಲಾ ಚೆಕ್ ಪೋಸ್ಟ್‌ಗಳನ್ನು ಬಿಗಿಗೊಳಿಸಲಾಗಿದೆ.ಗಂಟನದೊಡ್ಡಿ ಬಳಿಯಿರುವ ಚೆಕ್ ಪೋಸ್ಟ್‌ನಲ್ಲಿ ಮರಳಿನ ಲಾರಿಯೊಂದನ್ನು ತಡೆದು ತಪಾಸಣೆ ಮಾಡುತ್ತಿದ್ದಾಗ ಹಿಂದೆಯೇ ಆಟೋ ಮತ್ತು ಮೋಟಾರ್ ಬೈಕ್‌ನಲ್ಲಿ ಬಂದ ನಾಲ್ಕು ಮಂದಿ ಲಾರಿಯನ್ನು ತಡೆಯುತ್ತಿರುವುದೇಕೆ ಎಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.ಈ ಸಂದರ್ಭದಲ್ಲಿ ಪೊಲೀಸರ ಲಾಟಿಯನ್ನೇ ಕಿತ್ತುಕೊಂಡು ಪೇದೆಗೆ ಹೊಡೆದು ಪರಾರಿಯಾಗಿದ್ದಾರೆ ಎಂದು ಹಾರೋಹಳ್ಳಿ ಸಬ್ ಇನ್‌ಸೆಕ್ಟರ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.