ಲಖನೌ (ಪಿಟಿಐ): ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಇಮ್ತಿಯಾಜ್ ಮುರ್ತಜಾ ಮತ್ತು ದೇವೇಂದ್ರ ಕುಮಾರ್ ಉಪಾಧ್ಯ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಪರಿಸ್ಥಿತಿಯನ್ನು ತಿಳಿಗೊಳಿಸಲಿಕ್ಕಾಗಿ ವರ್ಗಾವಣೆ ಆದೇಶ ನೀಡಿದ್ದು, ಅಧಿಕಾರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಉದ್ದೇಶ ಪೀಠಕ್ಕೆ ಇಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಿದ ಪೀಠವು ಮುಷ್ಕರ ಕೈ ಬಿಟ್ಟು ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ವೈದ್ಯರಿಗೆ ಸಲಹೆ ಮಾಡಿತು.

ಲೋಕಸಭಾ ಚುನಾವಣೆ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿ ಇದ್ದು, ಅಧಿಕಾರಿಗಳ ವರ್ಗಾವಣೆ ಸಾಧ್ಯವಿಲ್ಲ ಎಂಬ ಸರ್ಕಾರದ ಮನವಿಯನ್ನು ಪೀಠವು ಮಾನ್ಯ ಮಾಡಲು ನಿರಾಕರಿಸಿತು.

ಇದೇ ವೇಳೆ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ವಿ.ಕೆ.ಮಾಥುರ್ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸುವಂತೆ ಸರ್ಕಾರಕ್ಕೆ ಆದೇಶಿಸಿತು.

ಈಗಾಗಲೇ ನಿವೃತ್ತ ನ್ಯಾಯಮೂರ್ತಿ ಆರ್.ಎಂ.ಎಸ್.ಚೌಹಾಣ್ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ ಎಂದು ಸರ್ಕಾರ ಹೇಳಿತು.ಆಗ ತನ್ನ ಆದೇಶವನ್ನು ತಡೆಹಿಡಿದ ಪೀಠವು, ಮೂರು ವಾರದ ಒಳಗೆ ಆಯೋಗದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ಆದೇಶಿಸಿತು.

ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ಸಂಸ್ಥೆ ಆಡಳಿತಾಧಿಕಾರಿ ಸೇರಿದಂತೆ ಮತ್ತಿತರರ ಪ್ರತಿಕ್ರಿಯೆ ಪಡೆದ ಪೀಠವು ಮುಂದಿನ ವಿಚಾರಣೆಯನ್ನು ಮಾರ್ಚ್ 10ಕ್ಕೆ ನಿಗದಿಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.