ಭಾನುವಾರ, ಜೂನ್ 13, 2021
26 °C

ಪೊಲೀಸರ ಸಮಯಪ್ರಜ್ಞೆ- ಸಿಎಂ ಮೆಚ್ಚುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: `ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಮಾಧ್ಯಮದವರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಶನಿವಾರ ತಿಳಿಸಿದರು.



`ಸರ್ಕಾರಿ ಸವಲತ್ತುಗಳ ಸಂತೆ~ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೆಲಿಕಾಪ್ಟರ್‌ನಲ್ಲಿ ನಗರಕ್ಕೆ ಆಗಮಿಸಿದ ಅವರು ಹೆಲಿಪ್ಯಾಡ್‌ನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ `ಹಲ್ಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಸಮಾಜದಲ್ಲಿ ಆಗಾಗ್ಗೆ ನಡೆಯುತ್ತಿರುವ ಸಂಘರ್ಷಗಳನ್ನು ಹತ್ತಿಕ್ಕಲು ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು  ಎಂದು ಹೇಳಿದರು.



`ಹಲ್ಲೆ ನಡೆಸಿದ ಸಂದರ್ಭದಲ್ಲಿ ಪೊಲೀಸರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಭಾಯಿಸಿದರು. ಒಂದು ವೇಳೆ ಲಾಠಿ ಪ್ರಹಾರ, ಗುಂಡನ್ನು ಹಾರಿಸಿದ್ದರೆ ಹತ್ತಾರು ಹೆಣಗಳು ಉರುಳುತ್ತಿದ್ದವು. ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ~ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.