ಪೊಲೀಸ್‌ವರ್ಗಾವಣೆ: ಸರ್ಕಾರಕ್ಕೆ ಗಡುವು

7

ಪೊಲೀಸ್‌ವರ್ಗಾವಣೆ: ಸರ್ಕಾರಕ್ಕೆ ಗಡುವು

Published:
Updated:

ಬೆಂಗಳೂರು: ಪೊಲೀಸರ ವರ್ಗಾವಣೆ ಪ್ರಕ್ರಿಯೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಹೆಚ್ಚುತ್ತಿರುವ ಬಗ್ಗೆ ಸಲ್ಲಿಸಲಾಗಿರುವ ದೂರಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಾಲ್ಕು ವಾರಗಳ ಗಡುವು ನೀಡಿದೆ.ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಸ್ಥಾಪಕ ಅಧ್ಯಕ್ಷ ವಿ. ಶಶಿಧರ್ ಸಲ್ಲಿಸಿರುವ ದೂರು ಆಧರಿಸಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ಈ ನಿರ್ದೇಶನ ನೀಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry