ಪೊಲೀಸ್ ಠಾಣೆಯಿಂದ ವಾಹನ ಸಂಚಾರಕ್ಕೆ ಅಡ್ಡಿ

7

ಪೊಲೀಸ್ ಠಾಣೆಯಿಂದ ವಾಹನ ಸಂಚಾರಕ್ಕೆ ಅಡ್ಡಿ

Published:
Updated:

ನಗರದ ಪ್ರಮುಖ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಕಾಟನ್‌ಪೇಟೆ ಮುಖ್ಯ ರಸ್ತೆ ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಈ ಮುಖ್ಯ ರಸ್ತೆಯಲ್ಲಿರುವ ಕಾಟನ್‌ಪೇಟೆ ಪೊಲೀಸ್ ಠಾಣೆ ಬಳಿ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡಿರುವ ದ್ವಿಚಕ್ರ ಮತ್ತು ಕಾರುಗಳನ್ನು ಪೊಲೀಸ್ ಠಾಣೆಯ ಅಕ್ಕಪಕ್ಕದಲ್ಲಿ ಸಿಕ್ಕಂತೆ ನಿಲ್ಲಿಸಲಾಗಿದೆ. ಮೊದಲೇ ಕಿರಿದಾದ ರಸ್ತೆ ಇನ್ನಷ್ಟು ಕಿರಿದಾಗಿದೆ. ಪಾದಚಾರಿಗಳಂತೂ ರಸ್ತೆಗಿಳಿಯುವುದು ಅನಿವಾರ್ಯವಾಗಿದೆ.  ಸಂಬಂಧಪಟ್ಟವರು ಇತ್ತ ಗಮನ ಹರಿಸಿ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲಿ.

ಎಂ. ಉಮಾಶಂಕರ ಬಾಬು

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry