ಸೋಮವಾರ, ಜೂನ್ 14, 2021
27 °C

ಪೊಲೀಸ್ ವಾಹನ ಡಿಕ್ಕಿ: ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೊಲೀಸ್ ಇಲಾಖೆಯ ವಾಹನವೊಂದು ಆಟೊಗೆ ಡಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಗಾಯಗೊಂಡ ಘಟನೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದೆ.ಘಟನೆಯಲ್ಲಿ ಗಾಯಾಗೊಂಡ ಆಟೊ ಚಾಲಕ ಸೈಯದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಗ್ಗೆರೆ ಮುಖ್ಯರಸ್ತೆಯಲ್ಲಿರುವ ಕೃಷ್ಣಾನಂದನಗರದಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನ ಆಟೊಗೆ ಡಿಕ್ಕಿ ಹೊಡೆದಿದೆ. ಪಶ್ಚಿಮ ವಿಭಾಗದ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಗ ಪಾನಮತ್ತನಾಗಿ ವಾಹನ ಚಾಲನೆ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ ಆದರೆ ಹಿರಿಯ ಅಧಿಕಾರಿಗಳು ಅದನ್ನು ದೃಢಪಡಿಸುತ್ತಿಲ್ಲ.`ಘಟನೆ ಬಗ್ಗೆ ತನಿಖೆ ನಡೆಸಿ ಶುಕ್ರವಾರ ಸಂಜೆಯೊಳಗೆ ವರದಿ ಸಲ್ಲಿಸುವಂತೆ ಎಸಿಪಿ ಅನಿಲ್ ಅವರಿಗೆ ತಿಳಿಸಿದ್ದೇನೆ. ವಾಹನ ಚಾಲನೆ ಮಾಡುತ್ತಿದ್ದವರು ಯಾರು, ಅವರು ಮದ್ಯಪಾನ ಮಾಡಿದ್ದರೇ ಎಂಬ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳುತ್ತೇನೆ~ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ ಎಂ.ಎ.ಸಲೀಂ ತಿಳಿಸಿದರು.ಅದು ಪೊಲೀಸ್ ಇಲಾಖೆಯ ವಾಹನ ಎಂಬುದನ್ನು ಸಲೀಂ ಖಚಿತಪಡಿಸಿದರು. ಗಂಗರಾಜು ಅದರ ಚಾಲಕ. ಸಂಜೆ ವಾಹನದಲ್ಲಿ ಅವರ ಮಗ ಕೂಡ ಇದ್ದರು ಎಂದು ಮಾಹಿತಿ ಬಂದಿದೆ. ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.