ಶುಕ್ರವಾರ, ಮೇ 7, 2021
25 °C

`ಪೊಲೀಸ್- ಸಾರ್ವಜನಿಕ ಬಾಂಧವ್ಯ ಸುಧಾರಿಸಲಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಸಮುದಾಯ ಪೊಲೀಸ್' ವ್ಯವಸ್ಥೆಯಿಂದ ಸ್ಥಳೀಯ ಮಟ್ಟದಲ್ಲಿ ನಡೆಯುವ ಶೇ 85ರಷ್ಟು ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಾಧ್ಯವಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟರು.ಸಮುದಾಯ ಪೊಲೀಸ್ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, `ಸಮಾಜದ ರಕ್ಷಣೆಗೆ ನಿಂತಿರುವ ಪೊಲೀಸರಿಗೆ ಸಮುದಾಯ ಪೊಲೀಸ್ ವ್ಯವಸ್ಥೆ ಮೂಲಕ ನಾಗರಿಕರು ನೆರವಾಗಲಿದ್ದಾರೆ. ಇದರಿಂದ ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ಅಂತರ ಕಡಿಮೆಯಾಗಿ, ಉತ್ತಮ ಬಾಂಧವ್ಯ ವೃದ್ಧಿಯಾಗಲಿದೆ' ಎಂದು ಅಭಿಪ್ರಾಯಪಟ್ಟರು.ಇಲಾಖೆಯ ಶೇ 60ರಷ್ಟು ಸಿಬ್ಬಂದಿಗೆ ವಸತಿ ಸೌಕರ್ಯದ ಕೊರತೆ ಇದೆ. ಈ ಸಮಸ್ಯೆಯನ್ನು ನಿವಾರಣೆ ಮಾಡುವ ಉದ್ದೇಶದಿಂದ 5,000 ಮನೆಗಳನ್ನು ಕಟ್ಟಿಸಿಕೊಡುವ ಯೋಜನೆ ರೂಪಿಸಲಾಗಿದ್ದು, ಶೀಘ್ರವೇ ಅದನ್ನು ಅನುಷ್ಠಾನಕ್ಕೆ ತರಲಾಗುವುದು. ಜತೆಗೆ, ಸ್ವಂತ ಮನೆ ಖರೀದಿಸಲು ಇಚ್ಛಿಸುವ ಪೊಲೀಸರಿಗೆ ಸಾಲ ಕೊಟ್ಟು ಕಂತಿನ ರೂಪದಲ್ಲಿ ಮರುಪಾವತಿಸಿಕೊಳ್ಳುವ ಯೋಜನೆಯನ್ನೂ ಸಿದ್ಧಪಡಿಸಲಾಗಿದೆ. ಈ ಸಂಬಂಧ ಈಗಾಗಲೇ ಹುಡ್ಕೊ ಕಂಪೆನಿ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ ಎಂದರು.ನಿವೃತ್ತ ಡಿಜಿಪಿ ಡಾ.ಎಸ್.ಟಿ.ರಮೇಶ್ ಮಾತನಾಡಿ, `ಪೊಲೀಸರ ಬಗ್ಗೆ ನಾಗರಿಕರಲ್ಲಿ ತಪ್ಪು ಅಭಿಪ್ರಾಯವಿದೆ. `ಸಮುದಾಯ ಪೊಲೀಸ್' ವ್ಯವಸ್ಥೆಯಿಂದ ಈ ಮನೋಭಾವ ದೂರವಾಗುತ್ತದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಾಯ ಪೊಲೀಸ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬೇಕು' ಎಂದರು.ರಾಜ್ಯ ಪೊಲೀಸ್ ಮಹಾನಿರ್ದೇಶಕ ಲಾಲ್ ರೋಕುಮಾ ಪಚಾವೊ, ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಔರಾದಕರ್, ಜನಾಗ್ರಹ ಸಂಸ್ಥೆಯ ಅಧ್ಯಕ್ಷ ಪಿ.ಕೆ.ಎಚ್.ತಾರಕನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.