ಪೋಲಿಯೊ ಅಭಿಯಾನ ಯಶಸ್ವಿಗೊಳಿಸಿ

7

ಪೋಲಿಯೊ ಅಭಿಯಾನ ಯಶಸ್ವಿಗೊಳಿಸಿ

Published:
Updated:

ತುಮಕೂರು: ಪಲ್ಸ್ ಪೋಲಿಯೊ ಅಭಿಯಾನವನ್ನು 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಸಂಸದ ಜಿ.ಎಸ್.ಬಸವರಾಜು ಕರೆ ನೀಡಿದರು.ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಮಗುವಿಗೆ ಹನಿ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ 2,90,446 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.  ನಗರ ಪ್ರದೇಶದಲ್ಲಿ 451 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 870 ಬೂತ್‌ಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್ ತಿಳಿಸಿದರು. ಶಾಸಕ ಸೊಗಡು ಶಿವಣ್ಣ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರತಾಪ್ ಸೂರ್ಯ, ಡಿಎಚ್‌ಒ ಡಾ.ಚೆನ್ನಮಲ್ಲಯ್ಯ, ಡಾ.ರಜನಿ, ವೈದ್ಯಾಧಿಕಾರಿಗಳು, ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿಗಳು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry