ಬುಧವಾರ, ಜೂನ್ 3, 2020
27 °C

ಪೋಲಿಯೊ ನಿರ್ಮೂಲನೆಗೆ ಸಹಕಾರ ಮುಖ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೊಳಕಾಲ್ಮುರು: ಸರ್ವರ ಹಿತದೃಷ್ಟಿಯಿಂದ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಯಶಸ್ವಿಗೆ ಸಂಘ, ಸಂಸ್ಥೆಗಳು ಮತ್ತು ಸಮುದಾಯ ಸಹಕಾರ ನೀಡಬೇಕು ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಪದ್ಮಾವತಿ ಮನವಿ ಮಾಡಿದರು.ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೊ ಲಸಿಕೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹೆಚ್ಚು ಮಾರಕವಾಗಿ ಕಾಡುತ್ತಿದ್ದ ಈ ರೋಗವನ್ನು ಬೇರು ಸಹಿತವಾಗಿ ನಿರ್ಮೂಲನೆ ಮಾಡಲು ಸರ್ಕಾರ ಪಣತೊಟ್ಟು ಹಮ್ಮಿಕೊಂಡಿರುವ ಕಾರ್ಯಕ್ರಮ ಯಶಸ್ವಿ ಹಾದಿಯಲ್ಲಿ ಸಾಗಿದ್ದು, ಗುರಿ ಮುಟ್ಟಲು ಇನ್ನೂ ಶ್ರಮಿಸುವ ಅಗತ್ಯವಿದೆ ಎಂದು ಹೇಳಿದರು.ಕಾರ್ಯಕ್ರಮವನ್ನು ತಹಶೀಲ್ದಾರ್ ರೇಣುಕಾಂಬಾ ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಉದ್ಘಾಟಿಸಿದರು.ವೈದ್ಯಾಧಿಕಾರಿ ಡಾ.ಮಲ್ಲಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಚಿದಾನಂದ್, ಶಿಶು ಅಭಿವೃದ್ಧಿ ಅಧಿಕಾರಿ ಎ.ಎನ್. ತಿರುಮಲಯ್ಯ, ಬಿಪಿಎಂ ಅನಿತಾ, ಆಶಾ ಮೇಲ್ವಿಚಾರಕಿ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.ಶೇ. 89 ಸಾಧನೆ: ತಾಲ್ಲೂಕಿನಲ್ಲಿ ಒಟ್ಟು 17,198 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಈ ಪೈಕಿ ಮೊದಲ ದಿನವಾದ ಭಾನುವಾರ 15,398 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ. 89ರಷ್ಟು ಸಾಧನೆ ಮಾಡಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.ಚಳ್ಳಕೆರೆ ವರದಿ

ರಾಷ್ಟ್ರದಾದ್ಯಂತ ಏಕಕಾಲದಲ್ಲಿ 5ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಹನಿ ನೀಡುವ ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನಾದ್ಯಂತ 43,792 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ 36,162, ನಗರ ಪ್ರದೇಶದಲ್ಲಿ 7,630 ಮಕ್ಕಳನ್ನು ಗುರುತಿಸಲಾಗಿದೆ. ಇದಕ್ಕಾಗಿ 224 ಲಕಿಕಾ ಕೇಂದ್ರಗಳು, 448 ವಾಕ್ಸಿನೇಟರ್‌ಗಳು ಹಾಗೂ 43 ಮೇಲ್ವಿಚಾರಕರು ಕಾರ್ಯ ನಿರ್ವಹಿಸುತ್ತಿದ್ದಾರೆ.ಪಟ್ಟಣದಲ್ಲಿ 6, ನಾಯಕನಹಟ್ಟಿಯಲ್ಲಿ 1, ಪರಶುರಾಂಪುರದಲ್ಲಿ 1 ಮೊಬೈಲ್ ಯೂನಿಟ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.   

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.