ಲಿಂಗಸುಗೂರ: ರಾಷ್ಟ್ರದಲ್ಲಿ ಕೆಲವೆಡೆ ಪೋಲಿಯೊ ವೈರಾಣು ಕಾಣಿಸಿಕೊಂಡು ಕೆಲ ಮಕ್ಕಳ ಮೇಲೆ ದುಷ್ಟರಿಣಾಮ ಬೀರಿತ್ತು. ಎಚ್ಚೆತ್ತುಕೊಂಡ ಸರ್ಕಾರ ಪೋಲಿಯೊ ವೈರಾಣ ಹರಡದಂತೆ ಮುಂಜಾಗ್ರತ ಕ್ರಮವಾಗಿ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ಆಯೋಜಿಸಿದೆ. ಕಾರಣ ಪ್ರತಿಯೋರ್ವರು ತಮ್ಮ ಮಗುವಿಗೆ ಲಸಿಕೆ ಹಾಕಿಸುವ ಮೂಲಕ ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗುವಂತೆ ಶಾಸಕ ಮಾನಪ್ಪ ವಜ್ಜಲ ಸಲಹೆ ಮಾಡಿದರು.

ಭಾನುವಾರ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮದಲ್ಲಿ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದ ಅವರು, ಈಗಾಗಲೆ ಎಷ್ಟೊ ಬಾರಿ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿರಬಹುದು. ಅಂತಹ ಮಗುವಿಗೂ ಕೂಡ ಪುನಃ ಲಸಿಕೆ ಹನಿ ಹಾಕಿಸಿ ಮಗುವಿನ ಭವಿಷ್ಯದ ಜೊತೆಗೆ ಪೋಲಿಯೊ ನಿರ್ಮೂಲನೆಗೆ ಸಹಕಾರ ನೀಡಬೇಕು. ಸಂಘ ಸಂಸ್ಥೆಗಳು, ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳುವಂತೆ ಕೋರಿದರು.

ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಭೂಪನಗೌಡ ಕರಡಕಲ್ಲ, ತಹಸೀಲ್ದಾರ ಜಿ. ಮುನಿರಾಜಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ. ಮಹಾದೇವಯ್ಯ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಿಜಯಕುಮಾರ, ಸಿಡಿಪಿಓ ಕೆ. ಪ್ರಭಾಕರ, ಪುರಸಭೆ ಮುಖ್ಯಾಧಿಕಾರಿ ಈರಣ್ಣ ಬಿರಾದರ, ಡಾ. ಚಂದ್ರಬಾಬು, ಡಾ. ದಿಗಂಬರ, ಡಾ. ಶ್ರೀನಿವಾಸ, ಡಾ. ಕಡದರಳ್ಳಿ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.