ಪೋಲಿಯೋ ಪೀಡಿತ ರಾಷ್ಟ್ರಗಳ ಪಟ್ಟಿಯಿಂದ ಭಾರತ ಹೊರಕ್ಕೆ

7

ಪೋಲಿಯೋ ಪೀಡಿತ ರಾಷ್ಟ್ರಗಳ ಪಟ್ಟಿಯಿಂದ ಭಾರತ ಹೊರಕ್ಕೆ

Published:
Updated:
ಪೋಲಿಯೋ ಪೀಡಿತ ರಾಷ್ಟ್ರಗಳ ಪಟ್ಟಿಯಿಂದ ಭಾರತ ಹೊರಕ್ಕೆ

ನವದೆಹಲಿ (ಪಿಟಿಐ): ಪೋಲಿಯೋಪೀಡಿತ ರಾಷ್ಟ್ರಗಳ ಪಟ್ಟಿಯಿಂದ ಭಾರತವನ್ನು ವಿಶ್ವ ಆರೋಗ್ಯ ಸಂಸ್ಥೆಯು ತೆಗೆದು ಹಾಕಿದ್ದು ಈ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗುವತ್ತ ಮುನ್ನಡೆದಿದೆ. ಈ ವಿಷಯವನ್ನು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಆಜಾದ್ ಅವರು ಸುದ್ದಿಗಾರರಿಗೆ ತಿಳಿಸಿ ಹರ್ಷ ವ್ಯಕ್ತಪಡಿಸಿದರು.ಸದ್ಯಕ್ಕೆ ವಿಶ್ವ ಆರೋಗ್ಯ ಸಂಸ್ಥೆಯು ಭಾರತವನ್ನು ಪೋಲಿಯೊ ಪೀಡಿತ ರಾಷ್ಟ್ರಗಳ ಪಟ್ಟಿಯಿಂದ ತೆಗೆದುಹಾಕಿದೆ. ಇನ್ನೂ ಎರಡು ವರ್ಷಗಳಲ್ಲಿ ಯಾವುದೇ ಪೋಲಿಯೋ ಪ್ರಕರಣ ದಾಖಲಾಗದಿದ್ದರೆ ಭಾರತವೂ ಪೋಲಿಯೂ ಮುಕ್ತ ರಾಷ್ಟ್ರಗಳ ಸಾಲಿನಲ್ಲಿ ಸ್ಥಾನ ಪಡೆಯಲಿದೆ.ಇದಕ್ಕೆ ಸಂತೋಷ ವ್ಯಕ್ತಪಡಿಸಿರುವ ಪ್ರಧಾನಿ ಮನಮೋಹನಸಿಂಗ್ ಅವರು ಇದರ ಎಲ್ಲಾ ಶ್ರೇಯಸ್ಸು ಪೋಲಿಯೋ ನಿರ್ಮೂಲನೆಗೆ ಶ್ರಮಿಸುತ್ತಿರುವ 23 ಲಕ್ಷ ಸ್ವಯಸೇವಕರಿಗೆ ಸಲ್ಲಬೇಕೆಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry