ಪೌರಕಾರ್ಮಿಕರಿಗೆ ಖರ್ಗೆ ಅಭಯ

7

ಪೌರಕಾರ್ಮಿಕರಿಗೆ ಖರ್ಗೆ ಅಭಯ

Published:
Updated:

ಬೆಂಗಳೂರು: `ಪೌರ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ~ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ಅಖಿಲ ಕರ್ನಾಟಕ ಡಾ.ಬಿ.ಆರ್.ಅಂಬೇಡ್ಕರ್ ಆದಿ ದ್ರಾವಿಡ ಪೌರ ಕಾರ್ಮಿಕರ ಜನಾಂಗದ ಅಭಿವೃದ್ಧಿ ಟ್ರಸ್ಟ್ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.`ರಾಜ್ಯದಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಬೇಕು. ಅವರಿಗೆ ವಿಮಾ, ಪಿಂಚಣಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮುಖ್ಯಮಂತ್ರಿಗಳು ಗಮನ ಹರಿಸಬೇಕು. ಅವರು ಕಾರ್ಯಕ್ರಮಕ್ಕೆ ಹಾಜರಾಗಿ, ಪೌರ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಬೇಕಿತ್ತು. ಸಂಬಂಧ ಸಚಿವರು ಕೂಡ ಇಂತಹ ಕಾರ್ಯಕ್ರಮಗಳಿಗೆ ಹಾಜರಾಗದಿರುವುದು ಸರಿಯಲ್ಲ~ ಎಂದರು.ನಂತರ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಅಶ್ವಥ್ ನಾರಾಯಣ, `ರಾಜ್ಯದ ಸಚಿವರು ಮಠಾಧೀಶರ ಕಾರ್ಯಕ್ರಮಗಳಿಗೆ ನೀಡುವಷ್ಟೇ ಮಹತ್ವವನ್ನು ಇಂತಹ ಜನಪರ ಕಾರ್ಯಕ್ರಮಗಳಿಗೂ ನೀಡಬೇಕು.ಪೌರಕಾರ್ಮಿಕರ ಇಎಸ್‌ಐ, ಭವಿಷ್ಯನಿಧಿ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಗುತ್ತಿಗೆದಾರರನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು~ ಎಂದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry