ಪೌರಕಾರ್ಮಿಕರಿಗೆ ನಿವೇಶನ: ವಿಜಯೋತ್ಸವ

ಶುಕ್ರವಾರ, ಮೇ 24, 2019
22 °C

ಪೌರಕಾರ್ಮಿಕರಿಗೆ ನಿವೇಶನ: ವಿಜಯೋತ್ಸವ

Published:
Updated:

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ಸಭೆ ಪಾಲಿಕೆಯ ಪೌರ ಕಾರ್ಮಿಕರಿಗೆ ನಿವೇಶನ ನೀಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ನೂರಾರು ಪೌರಕಾರ್ಮಿಕರು ಪಾಲಿಕೆ ಆವರಣದಲ್ಲಿ ವಿಜಯೋತ್ಸವ ಆಚರಿಸಿದರು.ಪೌರ ಕಾರ್ಮಿಕರ ಸಂಘದ ಆಶ್ರಯದಲ್ಲಿ ನಡೆದ ವಿಜಯೋತ್ಸವದಲ್ಲಿ ಪೌರಕಾರ್ಮಿಕರು ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದರು. ಸಿಹಿ ಹಂಚಿ, ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಶಾಸಕ ವೀರಭದ್ರ ಹಾಲಹರವಿ, ಸಂಸದ ಪಹ್ಲಾದ ಜೋಶಿ ಮುಂತಾದವರ ಪರವಾಗಿ ಘೋಷಣೆ ಕೂಗಿದ ಕಾರ್ಮಿಕರು ಬಿಜೆಪಿ ಸರ್ಕಾರಕ್ಕೆ ಜೈಕಾರ ಹಾಕಿದರು.ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಶಾಸಕ ವೀರಭದ್ರಪ್ಪ ಹಾಲಹರವಿ ಮಾತನಾಡಿ, ಪಾಲಿಕೆಯ ಪೌರ ಕಾರ್ಮಿಕರಿಗೆ ಸೂರು ಒದಗಿಸುವ ಬೇಡಿಕೆ ಹಲವು ವರ್ಷಗಳಿಂದ ಬೇಡಿಕೆಯಾಗಿಯೇ ಉಳಿದಿತ್ತು. ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ನವನಗರದಲ್ಲಿ 3 ಎಕರೆ 13 ಗುಂಟೆ ಜಾಗದಲ್ಲಿ 145 ನಿವೇಶನಗಳನ್ನು ಪೌರ ಕಾರ್ಮಿಕರಿಗೆ ನೀಡಲು ಅನುಮತಿ ನೀಡಿದೆ. ಹಲವು ಬಾರಿ ಮನವಿ ಸಲ್ಲಿಸಿದ ಫಲವಾಗಿ ನಮ್ಮವರೇ ಆದ ಜಗದೀಶ ಶೆಟ್ಟರ್ ಅವರು ಪೌರಕಾರ್ಮಿಕರ ಹಲವು ವರ್ಷಗಳ ಬೇಡಿಕೆ ಈಡೇರಿಸಿದ್ದಾರೆ.145 ಕಾರ್ಮಿಕರಿಗೆ ಮಾತ್ರವಲ್ಲದೆ ಉಳಿದ ಪೌರಕಾರ್ಮಿಕರಿಗೂ ನಿವೇಶನ ನೀಡುವ ಕುರಿತು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.ಮೇಯರ್ ಪಾಂಡುರಂಗ ಪಾಟೀಲ ಮಾತನಾಡಿ, 2003ರಿಂದಲೂ ಪೌರಕಾರ್ಮಿಕರಿಗೆ ನಿವೇಶನ ನೀಡುವ ಕುರಿತು ಹೋರಾಟ ನಡೆಯುತ್ತಲೇ ಇತ್ತು.ಕಾರ್ಮಿಕರು ಆಗಾಗ ಪ್ರತಿಭಟನೆ ನಡೆಸುತ್ತಿದ್ದರು. ಪೌರಕಾರ್ಮಿಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೇಡಿಕೆ ಈಡೇರಿಸಿದ್ದಾರೆ. ಪೌರ ಕಾರ್ಮಿಕರು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಅವಳಿ ನಗರವನ್ನು ಸ್ವಚ್ಛವಾಗಿಡಲು ಶ್ರಮಿಸಬೇಕು ಎಂದು ಹೇಳಿದರು.ಪೌರಕಾರ್ಮಿಕರ ಸಂಘದ ಅಧ್ಯಕ್ಷ ಗಂಗಾಧರ ಟಗರಗುಂಟಿ, ಸಂಘದ ಗೌರವಾಧ್ಯಕ್ಷ ನಿಂಗಪ್ಪ ಡಿ. ಮೊರಬದ, ಉಪಾಧ್ಯಕ್ಷ ಹೊನ್ನಪ್ಪ ಬಿ. ದೇವಗಿರಿ, ಪ್ರಧಾನ ಕಾರ್ಯದರ್ಶಿ ಬಸಪ್ಪ ಎಸ್. ಮಾದರ ಮುಂತಾದವರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry