ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಗುತ್ತಿಗೆ ಪೌರಕಾರ್ಮಿಕರಿಗೆ ಸಮರ್ಪಕವಾಗಿ ವೇತನ ಸಿಗುತ್ತಿಲ್ಲ ಎಂಬ ದೂರು ಹೆಚ್ಚಾಗಿದೆ. ಮೂರ್ನಾಲ್ಕು ತಿಂಗಳಿಂದ ಸರಿಯಾಗಿ ವೇತನ ಸಿಗದೆ ಜೀವನ ನಿರ್ವಹಣೆ ಕಷ್ಟವಾಗಿದೆ ಎಂಬುದು ಪೌರಕಾರ್ಮಿಕರ ಅಳಲು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 17 ಸಾವಿರ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಪ್ರತಿ ಪೌರಕಾರ್ಮಿಕರಿಗೆ ತಿಂಗಳಿಗೆ ₨ 5,400 ವೇತನ ನೀಡಲಾಗುತ್ತಿದೆ. ಗುತ್ತಿಗೆದಾರರು ಪೌರಕಾರ್ಮಿಕರಿಗೆ ಚೆಕ್ ರೂಪದಲ್ಲಿ ವೇತನ ನೀಡುವ ವ್ಯವಸ್ಥೆ ಇದೆ.

‘ಕೆಲ ಮಧ್ಯವರ್ತಿಗಳು ಚೆಕ್ಗಳನ್ನು ಪಡೆದು ಹಣ ನೀಡದೆ ವಂಚಿಸುತ್ತಿದ್ದಾರೆ. ಕೆಲ ಗುತ್ತಿಗೆದಾರರು ಬಿಬಿಎಂಪಿಯಿಂದ ಚೆಕ್ ಬಂದಿಲ್ಲ ಎಂದು ಹೇಳುತ್ತಾರೆ. ಪ್ರತಿ ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ವೇತನದ ಹಣ ಜಮೆ ಮಾಡಿದರೆ ಈ ಸಮಸ್ಯೆಯೇ ಇರುವುದಿಲ್ಲ’ ಎನ್ನುತ್ತಾರೆ ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ್.
‘ಪೌರಕಾರ್ಮಿಕರಿಗೆ ಸರಿಯಾಗಿ ವೇತನ ಸಿಗುತ್ತಿಲ್ಲ. ಗುತ್ತಿಗೆದಾರರು ಪೌರಕಾರ್ಮಿಕರಿಗೆ ವಂಚನೆ ಮಾಡುತ್ತಿದ್ದಾರೆ.

ಆರೋಗ್ಯ ವಿಮೆ ಹಾಗೂ ಭವಿಷ್ಯನಿಧಿಯ ಹಣವನ್ನು ಗುತ್ತಿಗೆದಾರರು ಸರಿಯಾಗಿ ಪಾವತಿಸುತ್ತಿಲ್ಲ. ಈ ಬಗ್ಗೆ ಪಾಲಿಕೆಯ ಆಯುಕ್ತರಿಗೂ ದೂರು ನೀಡಿದ್ದೇವೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಪ್ರತಿ ತಿಂಗಳ ವೇತನ ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲು ಬಿಬಿಎಂಪಿ ಮುಂದಾಗಬೇಕು. ಭವಿಷ್ಯನಿಧಿಗೆ ಗುತ್ತಿಗೆದಾರರ ಪಾಲಿನ ಹಣವನ್ನು ಕಡ್ಡಾಯವಾಗಿ ಕಟ್ಟಿಸಲು ಬಿಬಿಎಂಪಿ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.

‘ಮೂರು ತಿಂಗಳಿಂದ ವೇತನ ಬಂದಿಲ್ಲ. ಗುತ್ತಿಗೆದಾರರು ನೀಡಿದ ಚೆಕ್ ಬ್ಯಾಂಕ್ಗೆ ಹಾಕಿದರೆ ಹಣ ಜಮೆ ಆಗುತ್ತಿಲ್ಲ. ಚೆಕ್ ವಾಪಸ್ ಹೋಗುತ್ತಿದೆ ಎಂದು ಬ್ಯಾಂಕ್ನವರು ಹೇಳುತ್ತಿದ್ದಾರೆ. ಈ ಬಗ್ಗೆ ಗುತ್ತಿಗೆದಾರರನ್ನು ಕೇಳಿದರೆ ಬಿಬಿಎಂಪಿ ಅಧಿಕಾರಿಗಳನ್ನು ಕೇಳಿ ಎನ್ನುತ್ತಾರೆ. ಬಿಬಿಎಂಪಿ ಅಧಿಕಾರಿಗಳನ್ನು ಕೇಳಿದರೆ ಗುತ್ತಿಗೆದಾರರತ್ತ ಬೆರಳು ತೋರುತ್ತಾರೆ’ ಎಂದು ಪೌರಕಾರ್ಮಿಕ ಮಹಿಳೆ ಶಾರದಮ್ಮ ದೂರಿದರು.

‘ಪ್ರತಿ ತಿಂಗಳು ಬ್ಯಾಂಕ್ ಖಾತೆಗೆ ವೇತನದ ಹಣ ಜಮೆ ಆಗುವಂತೆ ಬಿಬಿಎಂಪಿ ಕ್ರಮ ಕೈಗೊಳ್ಳಬೇಕು. ಇದರಿಂದ ವೇತನ ವಿಳಂಬ ಹಾಗೂ ಚೆಕ್ ವಾಪಸ್ ಹೋಗುವುದನ್ನು ತಪ್ಪಿಸಬಹುದು. ಈ ಬಗ್ಗೆ ಪಾಲಿಕೆಯ ಹಿರಿಯ ಅಧಿಕಾರಿಗಳು ಗಂಭೀರವಾಗಿ ಚಿಂತಿಸಬೇಕು’ ಎಂದು ಅವರು ಹೇಳಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ, ‘ಬೊಮ್ಮನಹಳ್ಳಿ ವಲಯದಲ್ಲಿ ಪೌರಕಾರ್ಮಿಕರಿಗೆ ಸರಿಯಾಗಿ ಚೆಕ್ ನೀಡುತ್ತಿಲ್ಲ ಎಂಬ ದೂರುಗಳಿದ್ದವು. ಆ ಸಮಸ್ಯೆಯನ್ನು ಪರಿಹರಿಸಲಾಗಿದೆ. ಪೌರಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುವುದರಿಂದ ಅವರೊಂದಿಗೆ ಪಾಲಿಕೆ ನೇರ ಸಂಬಂಧ ಹೊಂದಿರುವುದಿಲ್ಲ. ಪ್ರತಿ ತಿಂಗಳು ಗುತ್ತಿಗೆದಾರರಿಗೆ ವೇತನದ ಚೆಕ್ ವಿತರಿಸಲಾಗುತ್ತಿದೆ. ಈ ಬಗ್ಗೆ ದೂರುಗಳಿದ್ದರೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

ಗುತ್ತಿಗೆದಾರರ ವಿರುದ್ಧ ಕ್ರಮ
ಗುತ್ತಿಗೆದಾರರು ಪೌರಕಾರ್ಮಿಕರಿಗೆ ಸರಿಯಾಗಿ ವೇತನ ನೀಡದೆ ಇದ್ದರೆ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ವೇತನದ ಹಣ ನೇರವಾಗಿ ಜಮೆ ಮಾಡುವ ಬಗ್ಗೆ ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸಲಾಗುವುದು.
–ಎಂ.ಲಕ್ಷ್ಮೀನಾರಾಯಣ,
ಆಯುಕ್ತರು, ಬಿಬಿಎಂಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.