ಬೆಂಗಳೂರು: `ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 4,000 ಪೌರಕಾರ್ಮಿಕರ ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು' ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮಿನಾರಾಯ ಪ್ರಕಟಿಸಿದರು.

ಸೋಮವಾರ ವರದಿಗಾರರ ಜೊತೆ ಮಾತನಾಡಿದ ಅವರು, `ಪೌರಕಾರ್ಮಿಕರ ನೇಮಕದಿಂದ ನಗರದ ಸ್ವಚ್ಛತಾ ಸಮಸ್ಯೆ ಬಹುಮಟ್ಟಿಗೆ ತಗ್ಗಲಿದ್ದು, ಇದರಿಂದ ಬಿಬಿಎಂಪಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ' ಎಂದು ಅಭಿಪ್ರಾಯಪಟ್ಟರು.

`ಜಿಲ್ಲಾ ಉಸ್ತುವಾರಿ ಸಚಿವ ಆರ್. ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚಿಸಿ ನೇಮಕಾತಿ ಮಾರ್ಗಸೂಚಿ ಸಿದ್ಧಪಡಿಸಲಾಗುವುದು. ಕೌನ್ಸಿಲ್ ಸಭೆಯಿಂದ ಮಾರ್ಗಸೂಚಿಗೆ ಒಪ್ಪಿಗೆ ಪಡೆಯಲಾಗುವುದು' ಎಂದರು. `ಬಿಬಿಎಂಪಿಗೆ 20,000 ಪೌರಕಾರ್ಮಿಕರ ಅಗತ್ಯವಿದ್ದು, ಹಂತ, ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು. ಮೊದಲ ಹಂತದಲ್ಲಿ 4,000 ಕಾರ್ಮಿಕರ ನೇಮಕಕ್ಕೆ ಅನುಮತಿ ದೊರೆತಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.