ಗುರುವಾರ , ಮೇ 19, 2022
24 °C

ಪೌರ ಕಾರ್ಮಿಕರ ಕಾಯಂಗೊಳಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಕಳೆದ ಎರಡು ದಶಕಗಳಿಂದಲೂ ಪೌರ ಕಾರ್ಮಿಕರು ಗುತ್ತಿಗೆ ಆಧಾರದ ಮೇಲೆಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನಾದರೂ ಹೊಸ ಸರ್ಕಾರ ಅವರ ಸೇವೆಯನ್ನು ಕಾಯಂ ಮಾಡಬೇಕು' ಎಂದು ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಪ್ರಸನ್ನಕುಮಾರ ಒತ್ತಾಯಿಸಿದರು.ರಾಜ್ಯ ಪೌರಕಾರ್ಮಿಕರ ಸಂಘ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ  ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದರು.

ಗುತ್ತಿಗೆದಾರರು ಮತ್ತು ಅಧಿಕಾರಿಗಳು ಪೌರ ಕಾರ್ಮಿಕರ ಶಕ್ತಿಯನ್ನು ಬಳಸಿಕೊಂಡು ಹಣ ದುರ್ಬಳಕೆ ಮಾಡುತ್ತಿದ್ದಾರೆ. ಪಾಲಿಕೆಯಲ್ಲಿ ಶೇ 70ರಷ್ಟು ಮಂದಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ಜನಾಂಗಕ್ಕೆ ಸೇರಿದವರೇ ಕಾರ್ಮಿಕರಾಗಿದ್ದು, ಅವರಿಗೆ ಸಮರ್ಪಕ ಸಂಬಳ ದೊರೆಯುತ್ತಿಲ್ಲ ಎಂದು ಆರೋಪಿಸಿದರು.`ಹತ್ತು ವರ್ಷ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವವರನ್ನು ಕಾಯಂ ಮಾಡಬೇಕು ಎಂದು 2006ರಲ್ಲಿ ಸುರ್ಪ್ರಿಂ ಕೋರ್ಟ್ ತೀರ್ಪು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಬಜೆಟ್‌ನಲ್ಲಿ ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಕಾರ್ಮಿಕರ ಭದ್ರತೆಯ ದೃಷ್ಟಿಯಿಂದ ಎಲ್ಲರಿಗೂ ಸಮಾನ ವೇತನ ನೀಡಬೇಕು' ಎಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.