ಪೌರ ಸಂಸ್ಥೆ: ಮಹಿಳೆಗೆ ಶೇ 50 ಮೀಸಲಾತಿ

7

ಪೌರ ಸಂಸ್ಥೆ: ಮಹಿಳೆಗೆ ಶೇ 50 ಮೀಸಲಾತಿ

Published:
Updated:

ಬೆಂಗಳೂರು: ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಸೋಮವಾರ ನಿರ್ಧಾರ ಕೈಗೊಂಡಿದೆ.ಮಹಿಳಾ ಮೀಸಲಾತಿಯ ಪ್ರಮಾಣ  ಹೆಚ್ಚಿಸುವುದಕ್ಕಾಗಿ ಮಹಾನಗರ ಪಾಲಿಕೆ ಕಾಯ್ದೆ ಮತ್ತು ಪುರಸಭೆ ಕಾಯ್ದೆಗಳಿಗೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

 

ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಸ್.ಸುರೇಶ್‌ಕುಮಾರ್, `ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ನೀಡಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲೂ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ಒದಗಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆ ಕಾಯ್ದೆ 1976 ಮತ್ತು ಕರ್ನಾಟಕ ಪುರಸಭೆ ಕಾಯ್ದೆ 1964ಕ್ಕೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ~ ಎಂದರು.ಈ ತಿದ್ದುಪಡಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳಿಗೆ ಅನ್ವಯವಾಗಲಿದೆ. ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲೂ ಅರ್ಧದಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಲಿವೆ. ಪ್ರಸ್ತುತ ಮಹಿಳೆಯರಿಗೆ ಶೇ 33.3ರಷ್ಟು ಮೀಸಲಾತಿ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry