ಶನಿವಾರ, ಮೇ 8, 2021
23 °C

ಪೌಷ್ಟಿಕ ಆಹಾರದ ಅರಿವು ಮೂಡಿಸಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ಗ್ರಾಮೀಣ ಮಹಿಳೆಯರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದರಿಂದ ದೈಹಿಕವಾಗಿ ಕುಗ್ಗಿ ಹೋಗಿರುತ್ತಾರೆ. ಹೀಗಾಗಿ, ಅವರಿಗೆ ಪೌಷ್ಟಿಕ ಆಹಾರದ ಸೇವನೆ ಅತ್ಯಗತ್ಯ. ಈ ಕುರಿತು ಅರಿವು ಮೂಡಿಸಬೇಕಿದೆ~ ಎಂದು ಕನಕಗಿರಿಯ ಪೂಜಾಪಾಲಾ ವೈದ್ಯಾಧಿಕಾರಿ ಶ್ರೀಧರಮೂರ್ತಿ ಹೇಳಿದರು.ತಾಲ್ಲೂಕಿನ ಮಲೆಯೂರು ಗ್ರಾ.ಪಂ. ಆವರಣದಲ್ಲಿ ಸಿಂಚನ ಟ್ರಸ್ಟ್‌ನಿಂದ ಹಮ್ಮಿಕೊಂಡಿದ್ದ ಗ್ರಾಮೀಣ ಮಹಿಳೆಯರಿಗೆ ಪೌಷ್ಟಿಕ ಆಹಾರದ ಮಹತ್ವ ಹಾಗೂ ಶೌಚಾಲಯದ ಅಗತ್ಯತೆ ಕುರಿತ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹಲವು ಮಹಿಳೆಯರು ಪೌಷ್ಟಿಕ ಆಹಾರದ ಕೊರತೆ ಪರಿಣಾಮ ರಕ್ತಹೀನತೆಗೆ ತುತ್ತಾಗುತ್ತಿದ್ದಾರೆ. ಇದರಿಂದ ತೊಂದರೆಗೆ ಸಿಲುಕುತ್ತಿದ್ದಾರೆ. ಪೌಷ್ಟಿಕ ಆಹಾರ ಸೇವಿಸಿದರೆ ರೋಗರುಜಿನಗಳಿಂದ ದೂರವಿರಬಹುದು ಎಂದ ಅವರು, ಗ್ರಾಮೀಣರಿಗೆ ಪೌಷ್ಟಿಕ ಆಹಾರದ ಮಹತ್ವ ಕುರಿತು ಪೂರ್ವ ಮಾಹಿತಿ ಇರುವುದಿಲ್ಲ. ಇದರಿಂದ ಅನಾರೋಗ್ಯಕ್ಕೆ ತುತ್ತಾಗುತ್ತಾರೆ ಎಂದು ಹೇಳಿದರು.ಪ್ರತಿ ಕುಟುಂಬವೂ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ವಿಶೇಷ ಒತ್ತು ನೀಡಬೇಕು. ಸುತ್ತಮುತ್ತಲಿನ ಪರಿಸರ  ಸ್ವಚ್ಛವಾಗಿದ್ದರೆ ಆರೋಗ್ಯವೂ ಸದೃಢವಾಗಿರುತ್ತದೆ. ಬಯಲು ಶೌಚಾಲಯದಿಂದ ಸಾಂಕ್ರಾಮಿಕ ರೋಗಗಳ ಹರಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.ಕೆಡಿಪಿ ಸದಸ್ಯ ಮೂಡ್ನಾಕೂಡು ಪ್ರಕಾಶ್ ಮಾತನಾಡಿ, ಮಹಿಳೆಯರು ತಾವು ವಾಸಿಸುವ ಪರಿಸರ ಹದಗೆಡದಂತೆ ಎಚ್ಚರಿಕೆವಹಿಸಬೇಕು, ಶುಚಿತ್ವ ಕಾಪಾಡಿಕೊಂಡರೆ ಆರೋಗ್ಯವೂ ಉತ್ತಮವಾಗಿರುತ್ತದೆ ಎಂದು ಕಿವಿಮಾತು ಹೇಳಿದರು.ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಮಹಾಲಕ್ಷ್ಮೀ, ಉಪಾಧ್ಯಕ್ಷ ನಾಗೇಂದ್ರ, ಪಂಕಜಾ, ಸಿಂಚನ ಟ್ರಸ್ಟ್‌ನ ನಿರ್ದೇಶಕಿ ಎಚ್.ಎಲ್. ಸುಧಾ, ಸಿಂಚನ, ಗ್ರಾ.ಪಂ. ಸದಸ್ಯರಾದ ಎಂ.ಎಲ್. ರೇವಣ್ಣ, ಪುಟ್ಟಮ್ಮ, ಬಸವಣ್ಣ, ಗುರುಮಲ್ಲಪ್ಪ, ಮಂಜುಳಾ ಇತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.