ಶಿವಮೊಗ್ಗ: ಆರೋಗ್ಯ ಇಲಾಖೆ ಅಧಿಕಾರಿಗಳು, ನಕಲಿ ವೈದ್ಯರೆಂದು ಆರೋಪಿಸಿ ಪ್ರಕರಣ ದಾಖಲಿಸುತ್ತಿರುವ ಕ್ರಮ ಖಂಡಿಸಿ ಗುರುವಾರ ಅನುಭವಿ ಮತ್ತು ವಂಶಪಾರಂಪರಿಕ ವೈದ್ಯರ ಸಂಘದ ನೇತೃತ್ವದಲ್ಲಿ ವೈದ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಖಾಸಗಿಯಾಗಿ ವೈದ್ಯಕೀಯ ಸೇವೆ ಮತ್ತು ಚಿಕಿತ್ಸೆ ಮಾಡುವ ವೈದ್ಯರು ಮತ್ತು ವೈದ್ಯಕೀಯ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂಬ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ಮತ್ತು 2009ರ ಕಾಯ್ದೆಯ ನಿಯಮ ಸ್ವಾಗತಾರ್ಹ. ಆದರೆ, ನಿಯಮದಲ್ಲಿ ವೈದ್ಯಕೀಯ, ಆಯುರ್ವೇದ, ಹೋಮಿಯೋಪಥಿ ಮಂಡಳಿಗಳಿಂದ ವಿದ್ಯಾರ್ಹತೆ ಪಡೆದವರು ಮಾತ್ರ ನೋಂದಣಿಗೆ ಅರ್ಹರು ಎಂಬ ಕಾಯ್ದೆಯಲ್ಲಿರುವ ಷರತ್ತು ಅವೈಜ್ಞಾನಿಕವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ದಶಕಗಳಿಂದ ಯಾವುದೇ ಪದವಿಗಳಿಲ್ಲದೇ, ವಂಶ ಪಾರಂಪರಿಕವಾಗಿ, ಕೆಲವು ಸಂಸ್ಥೆಗಳಲ್ಲಿ ತರಬೇತಿ ಪಡೆದು ವೈದ್ಯ ವೃತ್ತಿ ನಡೆಸುತ್ತಿರುವವರು ಈ ಕಾಯ್ದೆಯಲ್ಲಿನ ನಿಯಮದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ದೂರಿದರು.

ಈ ಕಾಯ್ದೆ ವಿರುದ್ಧ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ಹೊರಡಿಸಿದೆ. ಸರ್ಕಾರಕ್ಕೆ ತುರ್ತು ನೋಟೀಸ್ ಜಾರಿ ಮಾಡಿದೆ. ಈ ಹಿಂದಿನ ಜಿಲ್ಲಾಧಿಕಾರಿ ಕೂಡ ಹೈಕೋರ್ಟ್ ಆದೇಶದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆರೋಗ್ಯ ಇಲಾಖೆಗೆ ಹಿಂಬರಹ ನೀಡಿದ್ದಾರೆ.

ಆದರೂ, ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಕಾಯ್ದೆಯ ಪ್ರಕಾರ ವಂಶಪಾರಂಪರಿಕ ವೈದ್ಯರ ಮೇಲೆ ನಕಲಿ ವೈದ್ಯರೆಂದು ಆರೋಪಿಸಿ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅಧಿಕಾರಿಗಳು ನ್ಯಾಯಾಲಯದ ಆದೇಶ ಉಲ್ಲಂಘಿಸಿ ಉದ್ಧಟತನದಿಂದ ನಡೆದುಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಕ್ತ ತಿಳಿವಳಿಕೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಂಘಟನೆಯ ರಾಜ್ಯ ಪ್ರಧಾನ ಸಂಯೋಜಕ ಬಿ.ಎಸ್.ಚಂದ್ರು, ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎನ್.ಗೌಡ, ಕಾನೂನು ಸಲಹೆಗಾರ ಈಸೂರು ಲೋಕೇಶ್, ಹಿರಿಯ ಉಪಾಧ್ಯಕ್ಷ ಗಂಗಾಧರ ನಾಯರ್, ಎ.ಜಿ.ಖಾನ್, ಚಂದ್ರಶೇಖರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.