ಪ್ರಗತಿಯಲ್ಲಿ ಜಾರಕಿಹೊಳಿ ಸಹೋದರರ ಪಾತ್ರ ಪ್ರಮುಖ

7

ಪ್ರಗತಿಯಲ್ಲಿ ಜಾರಕಿಹೊಳಿ ಸಹೋದರರ ಪಾತ್ರ ಪ್ರಮುಖ

Published:
Updated:

ಗೋಕಾಕ: ನಾಡಿನ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿರುವ ಜಾರಕಿಹೊಳಿ ಸಹೋದರರ ಕಾರ್ಯ ಶ್ಲಾಘನೀಯ ಎಂದು ಜಾನಪದ ವಿದ್ವಾಂಸ ಡಾ. ಸಿ.ಕೆ.ನಾವಲಗಿ  ಮೆಚ್ಚುಗೆ ವ್ಯಕ್ತಪಡಿಸಿದರು.ಸೋಮವಾರ   ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಭೀಮವ್ವಾ– ಲಕ್ಷ್ಮಣರಾವ್ ಜಾರಕಿಹೊಳಿ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್‌ನ ಗುರುತಿನ ಚೀಟಿಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.  ಗೋಕಾಕ ತಾಲ್ಲೂಕು ಸಾಮಾಜಿಕ, ಸಾಹಿತ್ಯಿಕ, ಸಾಂಸ್ಕೃತಿಕ, ಔದ್ಯೋಗಿಕ, ರಾಜಕೀಯ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುವಲ್ಲಿ ಜಾರಕಿಹೊಳಿ ಸಹೋದರರ ಪಾತ್ರ ಮಹತ್ತರವಾಗಿದೆ. ಗೋಕಾಕ ನಗರವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಲ್ಲಿ ಇವರ ಕಾರ್ಯ ಶ್ಲಾಘನೀಯ ಎಂದು ಕೊಂಡಾಡಿದರು.ಬಡ ಜನತೆಗೆ  ಅನುಕೂಲ ಕಲ್ಪಿಸಿಕೊಡುವ  ನಿಟ್ಟಿನಲ್ಲಿ ತಾಲ್ಲೂಕಿನ ಎಲ್ಲ ಜನತೆಗೆ ನಾಗರಿಕ ಸುರಕ್ಷಾ ಅಪಘಾತ ವಿಮೆ ಯೋಜನೆ ಜಾರಿಗೊಳಿಸುವ ಮೂಲಕ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇಶದಲ್ಲಿಯೇ ಮಾದರಿ ಯೋಜನೆಯನ್ನು ರೂಪಿಸಿದ್ದಾರೆಂದು ಶ್ಲಾಘಿಸಿದರು.ನಾಡಿನ ಪ್ರಗತಿಯಲ್ಲಿ  ಲಕ್ಷ್ಮಣರಾವ್ ಜಾರಕಿಹೊಳಿ ಅವರ ಕೊಡುಗೆ ಅಪಾರ. ಅಧಿಕಾರ ಇಲ್ಲದೆಯೂ ಜನಸೇವೆ ಮಾಡುವುದನ್ನು ಅವರು ತೋರಿಸಿಕೊಟ್ಟಿದ್ದಾರೆ ಎಂದರು.ಶಾಸಕ ರಮೇಶ ಜಾರಕಿಹೊಳಿ ಅವರ ಪುತ್ರ ಸಂತೋಷ್‌ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಿದರು.ವೇದಿಕೆಯಲ್ಲಿ  ನಗರಸಭೆ ಅಧ್ಯಕ್ಷೆ  ಲಗಮವ್ವಾ ಸುಲಧಾಳ, ಉಪಾಧ್ಯಕ್ಷ ಎ.ಎಸ್. ಶಾಭಾಷಖಾನ್‌,  ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್‌ ಖೋತ, ಮಾಜಿ ನಗರಸಭೆ  ಅಧ್ಯಕ್ಷ ಎಸ್.ಎ. ಕೋತವಾಲ ಮತ್ತು ತಹಶೀಲ್ದಾರ್‌ ಡಾ. ಸಿದ್ದು ಹುಲ್ಲೋಳ್ಳಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ತುಕಾರಾಮ್‌ ಕಾಗಲ, ಸ್ವಾತಂತ್ರ್ಯ ಯೋಧ ಯು.ಎಫ್. ಯಲಿಗಾರ, ಹಿರಿಯ ನ್ಯಾಯವಾದಿ ಬಿ.ಆರ್.ಕೊಪ್ಪ, ಎಂ.ಎಂ. ನದಾಫ, ನಗರಸಭೆ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry